ಉದಯವಾಹಿನಿ, ವಿಶಾಖಪಟ್ಟಣ: ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದೆ.
ವಿಶಾಖಪಟ್ಟಣದಿಂದ 66 ಕಿ.ಮೀ ದೂರದದಲ್ಲಿರುವ ಎಲಮಂಚಿಲಿ ನಿಲ್ದಾಣದ ಬಳಿ ನಸುಕಿನ ಜಾವ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಲೋಕೋ ಪೈಲಟ್ ತಕ್ಷಣವೇ ಎಲಮಂಚಿಲಿ ರೈಲು ನಿಲ್ದಾಣದ ಬಳಿ ರೈಲನ್ನು ನಿಲ್ಲಿಸಿದ್ದಾರೆ.
ಬಿ1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಪಕ್ಕದ ಎಂ1 ಮತ್ತು ಬಿ2 ಬೋಗಿಗಳಿಗೆ ಹರಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಮತ್ತಷ್ಟು ಹರಡದಂತೆ ತಡೆಯಲು ಬೋಗಿಗಳನ್ನು ರೈಲಿನ ಉಳಿದ ಭಾಗಗಳಿಂದ ತಕ್ಷಣವೇ ಬೇರ್ಪಡಿಸಲಾಯಿತು.

Leave a Reply

Your email address will not be published. Required fields are marked *

error: Content is protected !!