ಉದಯವಾಹಿನಿ, ಇಸ್ಲಾಮಾಬಾದ್: ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ಭಾರತ ನಡೆಸಿದ ದಾಳಿಯ ಭೀಕರತೆಯ ಬಗ್ಗೆ ಪಾಕ್ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಸಾರ್ವಜನಿಕವಾಗಿ ಮಾತಾಡಿದ್ದಾರೆ. ಈ ವೇಳೆ ನನ್ನ ಮಿಲಿಟರಿ ಕಾರ್ಯದರ್ಶಿ ನನ್ನ ಬಳಿಗೆ ಬಂದು, ‘ಸರ್, ಯುದ್ಧ ಪ್ರಾರಂಭವಾಗಿದೆ’ ಎಂದು ಹೇಳಿದರು. ಅಲ್ಲದೇ “ಬಂಕರ್‌ಗಳಿಗೆ ಹೋಗೋಣ.” ಎಂದು ಸಲಹೆ ಕೊಟ್ಟಿದ್ದರು ಎಂದು ಈ ವೇಳೆ ನೆನಪಿಸಿಕೊಂಡಿದ್ದಾರೆ.ಈ ಕಾರ್ಯಾಚರಣೆಯು ಎರಡೂ ದೇಶಗಳ ನಡುವೆ ಸಂಘರ್ಷಕ್ಕೆ ಕಾರಣವಾಯಿತು. ಪಾಕಿಸ್ತಾನವು ಗಡಿಯಾಚೆಗಿನ ಶೆಲ್ ದಾಳಿಯನ್ನು ಹೆಚ್ಚಿಸಿತ್ತು. ಇದಕ್ಕೆ ಭಾರತ ತಕ್ಕ ಉತ್ತರ ನೀಡಿತ್ತು.
ಈ ಸಂಘರ್ಷ ಹೀಗೆ ಮುಂದುವರೆದರೆ ಪರಮಾಣು ಶಸ್ತ್ರಾಸ್ತ್ರಗಳ ದಾಳಿಯ ಕಳವಳಗಳನ್ನು ಹುಟ್ಟುಹಾಕಿತ್ತು. ಬಳಿಕ ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಸಂಘರ್ಷ ನಿಲ್ಲಿಸುವ ಪ್ರಸ್ತಾಪ ಮಾಡಿದ್ದರು. ಬಳಿಕ ಭಾರತ ಶಾಂತಿಗೆ ಒಪ್ಪಿಕೊಂಡ ಬಳಿಕ ಪರಿಸ್ಥಿತಿ ತಣ್ಣಗಾಗಿತ್ತು ಎಂದು ಅವರು ಒಪ್ಪಿಕೊಂಡಿದ್ದಾರೆ. ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿಯವರು ಕದನ ವಿರಾಮವನ್ನು ದೃಢಪಡಿಸಿದರು. ಬಳಿಕ ಎರಡೂ ಕಡೆಯವರು ಭೂಮಿ, ಸಮುದ್ರ ಮತ್ತು ವಾಯುಪ್ರದೇಶದ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಲು ನಿರ್ಧರಿಸಿದ್ದರು. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರ ಹತ್ಯೆಗೆ ಪ್ರತಿಕಾರವಾಗಿ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕೈಗೊಂಡಿತ್ತು. ಮೇ 7 ರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ 9 ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಲಾಗಿತ್ತು. ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಮಾಡುವ, ಉಗ್ರರ ಮುಂದಿನ ದಾಳಿಗಳನ್ನು ತಡೆಯುವ ಉದ್ದೇಶದಿಂದ ಈ ದಾಳಿ ನಡೆದಿತ್ತು.
