ಉದಯವಾಹಿನಿ, ಬೆಂಗಳೂರು: ಪ್ರತಿಷ್ಠಿತ ಔಷಧ ತಯಾರಿಕ ಕಂಪನಿಯ ಕಟ್ಟಡದ ಮೇಲಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.6ನೇ ಮಹಡಿಯ ಬಾಲ್ಕನಿಯಲ್ಲಿ ಗೆಳತಿಯೊಂದಿಗೆ ಮಾತನಾಡುತ್ತಾ ಕುಳಿತಿದ್ದ ಅನಂತ್ ಕುಮಾರ್ ಮೃತ ದುರ್ದೈವಿಯಾಗಿದ್ದಾನೆ. ಈ ಘಟನೆ ನಡೆದಿದೆ. ಬಾಲ್ಕನಿ ಬಳಿ ತನ್ನ ಸ್ನೇಹಿತೆಯೊಂದಿಗೆ ಮಾತನಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ನೇಹಿತೆಯ ಜೊತೆ ಏನು ಸಂಭಾಷಣೆ ನಡೆದಿದೆ ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
