ಉದಯವಾಹಿನಿ,ಬೀಜಿಂಗ್: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದು ನಾವೇ ಎಂದು ಚೀನಾ ಹೇಳಿಕೊಂಡಿದೆ. ಕ್ರೆಡಿಟ್‌ ಆಸೆಗಾಗಿ ಜಾಗತಿಕ ವೇದಿಕೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈ ಹೇಳಿಕೆ ಮೂಲಕ ಬೊಬ್ಬೊ ಹೊಡೆದಿದ್ದರು. ಈಗ ಟ್ರಂಪ್‌ ಜಾಗಕ್ಕೆ ಚೀನಾ ಬಂದಿದೆ. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ಮೇ ತಿಂಗಳಲ್ಲಿ ಭಾರತ-ಪಾಕಿಸ್ತಾನ ಉದ್ವಿಗ್ನತೆ ಶಮನಕ್ಕೆ ಚೀನಾ ಮಧ್ಯಸ್ಥಿಕೆ ವಹಿಸಿತು. ಸಮಸ್ಯೆಯನ್ನು ಪರಿಹರಿಸಲು ನ್ಯಾಯಯುತ ನಿಲುವು ಅಳವಡಿಸಿಕೊಂಡಿದೆ ಎಂದು ಹೇಳಿಕೊಂಡಿದ್ದಾರೆ. ಸಂಭಾವ್ಯ ಯುದ್ಧವನ್ನು ನಿಲ್ಲಿಸಲು ಅಮೆರಿಕ ಮಧ್ಯಪ್ರವೇಶಿಸಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳುತ್ತಿದ್ದರು. ಭಾರತವು ಮೂರನೇ ವ್ಯಕ್ತಿಯ ಹಸ್ತಕ್ಷೇಪವನ್ನು ದೃಢವಾಗಿ ತಿರಸ್ಕರಿಸಿತ್ತು. ನೇರ ದ್ವಿಪಕ್ಷೀಯ ಸಂವಹನದ ಮೂಲಕ ಕದನ ವಿರಾಮವನ್ನು ಸಾಧಿಸಲಾಗಿದೆ ಎಂದು ಭಾರತ ಸ್ಪಷ್ಟಪಡಿಸಿದರೂ, ಅಮೆರಿಕ ಮತ್ತು ಚೀನಾ ಉದ್ಧಟತನದ ಹೇಳಿಕೆಗಳನ್ನು ನೀಡುತ್ತಿವೆ.

ಎರಡನೇ ಮಹಾಯುದ್ಧದ ನಂತರ ಇತ್ತೀಚೆಗೆ ಹೆಚ್ಚಾಗಿ ಸ್ಥಳೀಯ ಯುದ್ಧಗಳು ಮತ್ತು ಗಡಿಯಾಚೆಗಿನ ಘರ್ಷಣೆಗಳು ಭುಗಿಲೆದ್ದವು. ಭೌಗೋಳಿಕ ರಾಜಕೀಯ ಪ್ರಕ್ಷುಬ್ಧತೆ ಹರಡುತ್ತಲೇ ಇತ್ತು. ಶಾಶ್ವತವಾದ ಶಾಂತಿಯನ್ನು ನಿರ್ಮಿಸಲು, ನಾವು ವಸ್ತುನಿಷ್ಠ ಮತ್ತು ನ್ಯಾಯಯುತ ನಿಲುವನ್ನು ತೆಗೆದುಕೊಂಡಿದ್ದೇವೆ. ಸಮಸ್ಯೆಗಳನ್ನು ಪರಿಹರಿಸುವತ್ತ ಗಮನ ಹರಿಸಿದ್ದೇವೆ ಎಂದು ಬೀಜಿಂಗ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಪರಿಸ್ಥಿತಿ ಮತ್ತು ಚೀನಾದ ವಿದೇಶಾಂಗ ಸಂಬಂಧಗಳ ಕುರಿತಾದ ವಿಚಾರ ಸಂಕಿರಣದಲ್ಲಿ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿಕೆ ನೀಡಿದ್ದಾರೆ

Leave a Reply

Your email address will not be published. Required fields are marked *

error: Content is protected !!