ಉದಯವಾಹಿನಿ,: ಲಕ್ನೋ: ಹೊಸ ವರ್ಷಾಚರಣೆ ಪ್ರಯುಕ್ತ ಉತ್ತರ ಪ್ರದೇಶದ ಮಥುರಾದಲ್ಲಿ ಆಯೋಜಿಸಲಾಗಿದ್ದ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಕಾರ್ಯಕ್ರಮವನ್ನ ರದ್ದುಗೊಳಿಸಲಾಗಿದೆ. ಸ್ಥಳೀಯ ಮಠಾಧೀಶರು, ಧಾರ್ಮಿಕ ಸಂಘಟನೆಗಳು ಹಾಗೂ ಸಂತರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮವನ್ನ ರದ್ದುಗೊಳಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಇದು ಶ್ರೀಕೃಷ್ಣನ ಜನ್ಮಸ್ಥಳವಾಗಿದೆ. ಇಲ್ಲಿ ‘ಶ್ರೀಕೃಷ್ಣ ಲೀಲೆ’ ಪ್ರದರ್ಶನ ನಡೆಯುತ್ತದೆ. ಜೊತೆಗೆ, ಪ್ರಾರ್ಥನೆ ಸಲ್ಲಿಸಲು ಧರ್ಮಗುರುಗಳು ಇಲ್ಲಿಗೆ ಬರುತ್ತಾರೆ. ಇಂತಹ ಸ್ಥಳದಲ್ಲಿ ಸನ್ನಿ ಲಿಯೋನ್ ಅವರನ್ನು ಕರೆಸಿ ಡಿಜೆ ಕಾರ್ಯಕ್ರಮ ಆಯೋಜಿಸಿರೋದು ಅಸಮಾಧಾನಕ್ಕೆ ಕಾರಣವಾಗಿದೆ.
ಸನ್ನಿ ಅವರನ್ನ ಮಥುರಾಕ್ಕೆ ಆಹ್ವಾನಿಸುವ ಮೂಲಕ ಕೆಲವರು ಪುಣ್ಯ ಭೂಮಿ ಮತ್ತು ಸನಾತನ ಧರ್ಮದ ಬಗ್ಗೆ ಅಪಪ್ರಚಾರ ಮಾಡಲು ಬಯಸುತ್ತಿದ್ದಾರೆ. ಸನ್ನಿ ಲಿಯೋನ್ ಅವರು ಅಶ್ಲೀಲತೆ ಪ್ರಚಾರ ಮಾಡುತ್ತಾರೆ. ಅಂಥವರನ್ನ ಈ ಪುಣ್ಯಮಣ್ಣಿನಿಂದ ದೂರವಿಡಬೇಕು ಎಂದು ಶ್ರೀ ಕೃಷ್ಣ ಜನ್ಮಭೂಮಿ ಸಂಘರ್ಷ ನ್ಯಾಸ್‌ನ ದಿನೇಶ್ ಫಲಹರಿ ತಿಳಿಸಿದ್ದಾರೆ.
