ಉದಯವಾಹಿನಿ, ಕೆ.ಆರ್.ಪೇಟೆ. :ವಿಧಾನಪರಿಷತ್ ಸದಸ್ಯ ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ.ಪಿ.ನಂಜುAಡಿಯವರು ದಿನಾಂಕ ೨೩-೦೭-೨೦೨೩ರ ಭಾನುವಾರ ತಾಲ್ಲೂಕಿಗೆ ವಿಶ್ವಕರ್ಮ ಸಮುದಾಯವನ್ನು ಎಸ್‌ಟಿ ಮೀಸಲಾತಿಗೆ ಸೇರಿಸುವಂತೆ ಹಾಗೂ ಕುಲಶಾಸ್ತಿçÃಯ ಅಧ್ಯಯನ ಜಾಗೃತಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ ಎಂದು ತಾಲ್ಲೂಕು ವಿಶ್ವಕರ್ಮ ಮಹಾಸಭಾ ತಿಳಿಸಿದೆ.
ಅಂದು ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿ ಕೇಂದ್ರದಲ್ಲಿ ಬೆಳಿಗ್ಗೆ ೧೦-೩೦ ಗಂಟೆಗೆ ಹಾಗೂ ಮದ್ಯಾಹ್ನ ಒಂದು ಗಂಟೆಗೆ ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸುವರು. ಮದ್ಯಾಹ್ನ ಮೂರು ಗಂಟೆಗೆ ಅಕ್ಕಿಹೆಬ್ಬಾಳು ಹೋಬಳಿಯ ಪುರ ಗ್ರಾಮದಲ್ಲಿ ಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು ತಾಲ್ಲೂಕಿನÀ ವಿಶ್ವಕರ್ಮ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
