ಉದಯವಾಹಿನಿ, ಬೆಂಗಳೂರು: ಹೊಸ ವರ್ಷದ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಮದ್ಯ ಮಾರಾಟದಿಂದ ಭರ್ಜರಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್‌ನಲ್ಲಿ 454.58 ಕೋಟಿ ರೂ. ಹೆಚ್ಚು ಅಬಕಾರಿ ಆದಾಯ ಸಂಗ್ರಹವಾಗಿದೆ.
2024ರ ಡಿ.30 ರಂದು 154.04 ಕೋಟಿ ರೂ., ಡಿ.31 ರಂದು 266. 73 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು. ಆದರೆ ಈ ಬಾರಿ ಡಿ. 30 ರಂದು 261.09 ಕೋಟಿ ರೂ., ಡಿ.31 ರಂದು 204.10 ಕೋಟಿ ರೂ. ಆದಾಯ ಸಂಗ್ರಹವಾಗಿದೆ.
