ಉದಯವಾಹಿನಿ, ರಾಯ್ಪುರ: ಜಾತಿ, ಸಂಪತ್ತು, ಭಾಷೆಯಿಂದ ಜನರನ್ನು ತಾರತಮ್ಯ ಮಾಡಬೇಡಿ, ಎಲ್ಲರೂ ನಿಮ್ಮವರೆಂದು ಭಾವಿಸಿ, ಭಾರತ ಎಲ್ಲರಿಗೂ ಸೇರಿದ್ದು ಎಂದು ದೇಶದ ಏಕತೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಕರೆ ನೀಡಿದ್ದಾರೆ. ಛತ್ತೀಸ್‌ಗಢದ ಸೋನ್‌ಪೈರಿ ಗ್ರಾಮದಲ್ಲಿ ಡ.31ರಂದು ನಡೆದ ಸಮಾರಂಭದಲ್ಲಿ ಮಾತನಾಡಿದರು. ದೇಶದಲ್ಲಿ ವಲಸೆಗಾರರ ಮೇಲಿನ ದಾಳಿಗಳು ಹೆಚ್ಚುತ್ತಿರುವ ಹೊತ್ತಲ್ಲಿ ಮತ್ತು ಡೆಹ್ರಾಡೂನ್‌ನಲ್ಲಿ ತ್ರಿಪುರ ಮೂಲದ ವಿದ್ಯಾರ್ಥಿಯೊಬ್ಬನ ಮೇಲೆ ದೌರ್ಜನ್ಯ ನಡೆಸಿ, ಸಾವನ್ನಪ್ಪಿರುವ ಸಂಬಂಧ ಮಾತನಾಡಿ, ಜಾತಿ, ಸಂಪತ್ತು, ಭಾಷೆ ಅಥವಾ ಪ್ರದೇಶದಿಂದ ಜನರನ್ನು ನೋಡಬೇಡಿ. ಎಲ್ಲರನ್ನೂ ನಿಮ್ಮವರೆಂದು ಭಾವಿಸಿ. ಇಡೀ ಭಾರತ ನನ್ನದು ಎಂದು ಭಾವಿಸಿ ಎಂದು ತಿಳಿಸಿದ್ದಾರೆ.

ತ್ರಿಪುರ ಮೂಲದ ಅಂಜೆಲ್ ಚಕ್ಮಾ ಎಂಬ ಎಂಬಿಎ ಅಂತಿಮ ವರ್ಷದ ವಿದ್ಯಾರ್ಥಿ ಡೆಹ್ರಾಡೂನ್‌ನಲ್ಲಿ ರಸ್ತೆಬದಿಯ ಕ್ಯಾಂಟೀನ್‌ನಲ್ಲಿ ಕುಳಿತಿದ್ದಾಗ ದಾಳಿ ನಡೆಸಲಾಗಿತ್ತು. ಅದಾದ ಬಳಿಕ 17 ದಿನಗಳ ಕಾಲ ಚಿಕಿತ್ಸೆ ಪಡೆದು, ಡಿ.26ರಂದು ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಸಾಮರಸ್ಯದ ಮೊದಲ ಹೆಜ್ಜೆಯಾಗಿ ಭೇದಭಾವ ಮತ್ತು ವಿಭಜನೆಯ ಭಾವನೆಗಳನ್ನು ಮನಸ್ಸಿನಿಂದ ತೆಗೆದುಹಾಕಬೇಕು. ಎಲ್ಲರನ್ನೂ ನಮ್ಮವರೆಂದು ಭಾವಿಸುವುದು ನಿಜವಾದ ಸಾಮಾಜಿಕ ಸಾಮರಸ್ಯ ಎಂದು ಹೇಳಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!