ಉದಯವಾಹಿನಿ, ಬೆರ್ನ್: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಐಷಾರಾಮಿ ಸ್ವಿಸ್ ಸ್ಕೀ ರೆಸಾರ್ಟ್‌ನ ಬಾರ್‌ನಲ್ಲಿ ಸ್ಫೋಟ ಸಂಭವಿಸಿದ್ದು, 40 ಮಂದಿ ಸಾವನ್ನಪ್ಪಿದ್ದಾರೆ. 100 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಬಾರ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಈ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳದಲ್ಲಿ ಅಂಬುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಏರ್-ಗ್ಲೇಸಿಯರ್ ಹೆಲಿಕಾಪ್ಟರ್‌ಗಳನ್ನು ಬಳಸಿ ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸ್ವಿಸ್ ಸ್ಕೀ ರೆಸಾರ್ಟ್‌ನ ಬಾರ್‌ನಲ್ಲಿ ಸ್ಫೋಟ: ಹಲವರು ಸಾವು
ಸ್ಫೋಟದ ಬಳಿಕ ಬಾರ್‌ನಿಂದ ದೊಡ್ಡ ಪ್ರಮಾಣದಲ್ಲಿ ಹೊಗೆ ಹೊಮ್ಮಿತು. ಈ ದೃಶ್ಯದ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸಂತ್ರಸ್ತರ ಕುಟುಂಬಗಳಿಗೆ ಸಹಾಯವಾಣಿ ಸ್ಥಾಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಸ್ವಿಸ್ ಆಲ್ಪ್ಸ್‌ನ ಹೃದಯಭಾಗದಲ್ಲಿರುವ ಕ್ರಾನ್ಸ್-ಮೊಂಟಾನಾ, ಅತ್ಯಂತ ಜನಪ್ರಿಯ ಪ್ರವಾಸಿ ತಾಣವಾಗಿದೆ. ಸ್ಕೀಯಿಂಗ್, ಸ್ನೋಬೋರ್ಡಿಂಗ್ ಮತ್ತು ಗಾಲ್ಫ್‌ನಂತಹ ಚಟುವಟಿಕೆಗಳಿಗಾಗಿ ಜಾಗತಿಕ ಪ್ರವಾಸಿಗರನ್ನು ಆಕರ್ಷಿಸುತ್ತದೆ.
