ಉದಯವಾಹಿನಿ, ಬಾಂಗ್ಲಾದೇಶದಲ್ಲಿ ಹಿಂದು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚುತ್ತಿದ್ದು, ಹಿಂಸಾತ್ಮಕ ಗುಂಪೊಂದು ಖೋಕೋನ್ ದಾಸ್ ಎಂಬ ಮತ್ತೊಬ್ಬ ಹಿಂದು ವ್ಯಕ್ತಿಯ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ ಘಟನೆ ಸಂಭವಿಸಿದೆ.
ಡಿ.18ರಂದು ಧರ್ಮನಿಂದನೆ ಆರೋಪ ಹೊರಿಸಿ ದೀಪು ಚಂದ್ರದಾಸ್ ಎಂಬುವವರನ್ನು ಗುಂಪೊಂದು ಹೊಡೆದು ಹತ್ಯೆ ಮಾಡಿ, ಶವವನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿತ್ತು. ಇದಾದ ಬಳಿಕ ಅಮೃತ್ ಮಂಡಲ್, ಬಜೇಂದ್ರ ಬಿಸ್ವಾಸ್ ಎಂಬವರನ್ನು ಹತ್ಯೆ ಮಾಡಲಾಗಿತ್ತು. ಇದೀಗ 50 ವರ್ಷದ ಖೋಕೋನ್ ದಾಸ್ ಮೇಲೆ ಹಲ್ಲೆ ನಡೆಸಲಾಗಿದೆ.
ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ಅಡಿಯಲ್ಲಿ ಬಾಂಗ್ಲಾದೇಶವು ಹಿಂದುಗಳು ಸೇರಿದಂತೆ ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ, ಇದು ಪ್ರಪಂಚದಾದ್ಯಂತ ಜನರು ಮತ್ತು ಹಲವಾರು ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ.
