ಉದಯವಾಹಿನಿ,ಬೆಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ನಿಂದಿಸಿದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದಿರುವುದರ ವಿರುದ್ಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಅವರನ್ನು ಭೇಟಿಯಾದ ಬಳಿಕ ಪೋಸ್ಟ್ ಮಾಡಿ ವಿಜಯಲಕ್ಷ್ಮಿ ಅತೃಪ್ತಿ ತೋಡಿಕೊಂಡಿದ್ದಾರೆ. ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೇನೆ. ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ ಈ ಅನುಭವವು ಆ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ ಎಂದಿದ್ದಾರೆ. ನಾನು ಸಲ್ಲಿಸಿದ ದೂರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಆದರೆ ಬೇರೆ ಮಹಿಳೆ ನೀಡಿದ ಮತ್ತೊಂದು ದೂರಿನ ಮೇಲೆ ಒಂದು ದಿನದೊಳಗೆ ಕ್ರಮ ಕೈಗೊಳ್ಳಲಾಗಿದೆ ಅಂತ ಪರೋಕ್ಷವಾಗಿ ರಮ್ಯಾ ಪ್ರಕರಣವನ್ನು ಪ್ರಸ್ತಾಪಿಸಿದ್ದಾರೆ. ನನ್ನ ದೂರು ಕಡಿಮೆ ಮುಖ್ಯವೇ ಅಥವಾ ಮಾನ್ಯವೇ? ಎಂದು ಪೋಸ್ಟ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ. ವಿಜಯಲಕ್ಷಿ ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಇದನ್ನು ಪರಿಶೀಲಿಸುವುದಾಗಿ ಆಯುಕ್ತರು ಹೇಳಿದ್ದಾರೆ.
