ಉದಯವಾಹಿನಿ, ಬೆಂಗಳೂರು: ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಉದ್ದೇಶ ಸರ್ಕಾರಕ್ಕಿದೆ. ಈ ಬಗ್ಗೆ ಶೀಘ್ರವೇ ನಿರ್ಧಾರ ಮಾಡುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಕಾಲೇಜುಗಳಲ್ಲಿ ಎಲೆಕ್ಷನ್ ಮಾಡುವ ಸಂಬಂಧ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ‌ನೀಡಿದ ಅವರು, ಕಾಲೇಜುಗಳಲ್ಲಿ ಚುನಾವಣೆ ಮಾಡುವ ಸಂಬಂಧವಾಗಿ ಕೆಪಿಸಿಸಿ ಅಧ್ಯಕ್ಷರು ನನ್ನ ಮತ್ತು ಸಚಿವ ಸುಧಾಕರ್ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿದ್ದಾರೆ. ಈ ಬಗ್ಗೆ ನಾವು ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ಜನವರಿ 13ಕ್ಕೆ ಸಮಿತಿಯ ಮೊದಲ ಸಭೆ ನಡೆಸಿ ನಿರ್ಧಾರ ಮಾಡುತ್ತೇವೆ ಎಂದರು.
ಕಾಲೇಜು ಹಂತದಲ್ಲಿ ನಾಯಕತ್ವ ಬೆಳೆಯಬೇಕು. ಅನೇಕರು ಕಾಲೇಜು ಹಂತದಲ್ಲಿ ನಾಯಕತ್ವದಿಂದ ಬಂದಿದ್ದಾರೆ. ಹೀಗಾಗಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಚೆ ಇದೆ. ಸಮಿತಿ ಸಭೆ ಮಾಡಿ ಕೆಪಿಸಿಸಿ ಅಧ್ಯಕ್ಷರಿಗೆ ವರದಿ ಕೊಡುತ್ತೇವೆ 1990 ರಲ್ಲಿ ವೀರೇಂದ್ರ ಪಾಟೀಲ್ ಅವರ ಅವಧಿಯಲ್ಲಿ ಬೆಂಗಳೂರಿನ ಕಾಲೇಜು ಕ್ಯಾಂಪಸ್‌ಗಳಲ್ಲಿ ಹಿಂಸಾಚಾರ ವರದಿಯಾದ ಬಳಿಕ ಕರ್ನಾಟಕದಲ್ಲಿ ಕಾಲೇಜು ಕ್ಯಾಂಪಸ್ ಚುನಾವಣೆಗಳನ್ನು ನಿಷೇಧಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!