ಉದಯವಾಹಿನಿ, ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ದೇವನಹಳ್ಳಿಯ ಟೋಲ್ ಪ್ಲಾಜಾ ಬಳಿ ಟೋಲ್ ಬೂತ್‌ಗೆ ಸ್ಲೀಪರ್ ಕೋಚ್ ಬಸ್ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿಲ್ಲ. ಚಾಲಕ ಹಾಗೂ ಸಹ ಚಾಲಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಹಾಗೂ ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೈದರಾಬಾದ್ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಟೋಲ್ ಬೂತ್‌ಗೆ ಡಿಕ್ಕಿಯಾದ ನಂತರ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸು ಹಿಂಬದಿಗೆ ಚಲಿಸಿದೆ. ಕೆಲ ಪ್ರಯಾಣಿಕರು ಬಸ್‌ನಿಂದ ಜಿಗಿದು, ಬಸ್ ತಡೆಯುವ ಪ್ರಯತ್ನ ನಡೆಸಿದ್ದಾರೆ. ಅದೃಷ್ಟವಶಾತ್ ಎಂಬಂತೆ ಟೋಲ್ ಬೂತ್‌ಗೆ ಮರಳಿ ಬಸ್ ಡಿಕ್ಕಿಯಾಗಿ ನಿಂತಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಹೊಗೆ ಆವರಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
