ಉದಯವಾಹಿನಿ, ಶಿವಮೊಗ್ಗ: ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ. ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.
ಜನಾರ್ಧನ ರೆಡ್ಡಿ ಮತ್ತವರ ಕುಟುಂಬವನ್ನು ಗುರಿಯನ್ನಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಉದ್ಘಾಟನೆಯ ಕಾರ್ಯಕ್ರಮದ ಬ್ಯಾನರ್‌ ಅಳವಡಿಸುವುದನ್ನು ನೆಪವಾಗಿಸಿಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ. ನಾಗರಿಕ ಸಮಾಜ ನೆಮ್ಮದಿಯಾಗಿ ಬದುಕುವ ವಾತಾವರಣವನ್ನು ವಿಚಲಿತಗೊಳಿಸಿ, ಭಯಗ್ರಸ್ಥ ನಗರವನ್ನಾಗಿಸಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಅವರ ಬೆಂಬಲಿಗರು ದುಷ್ಕೃತ್ಯಕ್ಕೆ ಇಳಿದಂತಿದೆ.
ಜನಾರ್ದನ ರೆಡ್ಡಿಯವರು ಬಿಜೆಪಿಗೆ ಮರು ಸೇರ್ಪಡೆಯಾದ ನಂತರ ಸ್ಥಳೀಯವಾಗಿ ಪಕ್ಷಸಂಘಟನೆ ಪ್ರಬಲವಾಗುತ್ತಿದೆ. ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ನಡುವಿನ ಬಾಂಧವ್ಯ ಹಿಂದಿನಂತೆ ಬೆಸೆದಿರುವುದು ರಾಜಕೀಯ ದುಷ್ಟರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ವಿಪರ್ಯಾಸವೆಂದರೆ ಸ್ಥಳೀಯ ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ‌ಕಛೇರಿಗಳಾಗಿ ಮಾರ್ಪಟ್ಟಿವೆ. ಸ್ಥಳೀಯ ಪೊಲೀಸರು ಕಾಂಗ್ರೆಸ್ ‌ಕೈಗೊಂಬೆಯಾಗಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!