ಉದಯವಾಹಿನಿ, ಭೋಪಾಲ್: ಇಂದೋರ್‌ನ ಭಾಗೀರಥಪುರದಲ್ಲಿ ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 200 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 1,400ಕ್ಕೂ ಅಧಿಕ ಜನರು ವಾಂತಿ, ಭೇದಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಕಳೆದ 8 ವರ್ಷಗಳಿಂದ ಇಂದೋರ್ ಭಾರತದ ಅತ್ಯಂತ ಸ್ವಚ್ಛ ನಗರವೆಂದು ಖ್ಯಾತಿ ಪಡೆದಿದೆ. ಈಗ ಅದೇ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಜನ ಸಾವನ್ನಪ್ಪುತ್ತಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಯೋಗಾಲಯದಲ್ಲಿ ನೀರಿನ ಪರೀಕ್ಷೆ ನಡೆದಿದ್ದು, ಕಲುಷಿತ ನೀರಿನಿಂದಾಗಿ ಜನರು ಅಸ್ವಸ್ಥರಾಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ನಾವೆಲ್ಲ ನಿನ್ನ ಬಗ್ಗೆ ಯೋಚಿಸುತ್ತಿದ್ದೇವೆ: ಉಮರ್ ಖಾಲಿದ್‌ಗೆ ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಬೆಂಬಲ
ಇಂದೋರ್‌ನ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ. ಮಾಧವ ಪ್ರಸಾದ್ ಹಸಾನಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಭಾಗೀರಥಪುರದಲ್ಲಿ ಪೈಪ್‌ಲೈನ್ ಸೋರಿಕೆಯಿಂದಾಗಿ ಕುಡಿಯುವ ನೀರು ಕಲುಷಿತಗೊಂಡಿರುವುದು ಪ್ರಯೋಗಾಲಯದ ವರದಿಯಲ್ಲಿ ದೃಢಪಟ್ಟಿದೆ ಎಂದು ಹೇಳಿದ್ದಾರೆ.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ದುಬೆ ಮಾತನಾಡಿ, ಭಾಗೀರಥಪುರದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ಗೆ ಬೇರೆ ಯಾವುದಾದರೂ ಕಲುಷಿತ ನೀರು ಸೇರಿಕೊಂಡಿದ್ದಾರೆ ಎಂದು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ್ದಾರೆ. ಗುರುವಾರದಿಂದ (ಜ.1) ಮನೆಗಳಿಗೆ ಪೈಪ್‌ಲೈನ್ ಮೂಲಕ ಶುದ್ಧ ನೀರನ್ನು ಸರಬರಾಜು ಮಾಡಲಾಗಿದೆ. ಆದರೂ ಕೂಡ ಜನರಿಗೆ ನೀರನ್ನು ಕುದಿಸಿ, ನಂತರ ಕುಡಿಯಬೇಕು ಎಂದು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!