ಉದಯವಾಹಿನಿ, ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಹಾಗೂ ವಾಲ್ಮೀಕ ಪುತ್ಥಳಿಗೆ ಸಂಬಂಧ ನಡೆದ ಗಲಾಟೆ ವಿಚಾರವಾಗಿ ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಬಿಜೆಪಿ ಕಾರ್ಯಕರ್ತ ನಾಗರಾಜ್ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜನಾರ್ದನ ರೆಡ್ಡಿ ಅವರು ಹಲ್ಲೆ ಹಾಗೂ ಕೊಲೆ ಯತ್ನ ಆರೋಪದ ಮೇಲೆ ಹಾಗೂ ಬಿಜೆಪಿ ಕಾರ್ಯಕರ್ತ ನಾಗರಾಜ್ ಅವರು ಅಕ್ರಮ ಪ್ರವೇಶ, ಜಾತಿ ನಿಂದನೆ, ಕೊಲೆ ಯತ್ನ ಹಾಗೂ ಗಲಾಟೆ ಆರೋಪ ಮೇಲೆ ದೂರು ನೀಡಿದ್ದರು
