ಉದಯವಾಹಿನಿ, ಬೆಂಗಳೂರು: EVM ಸಮೀಕ್ಷೆಯನ್ನ ಡಾ.ಆರ್ ಬಾಲಸುಬ್ರಮಣ್ಯಂ ಸ್ಥಾಪಿಸಿದ GRAAM ಎಂಬ NGO ನಡೆಸಿದೆ. ಅವರು 2024ರಲ್ಲಿ ಮೋದಿ ಬಗ್ಗೆ ಬರೆದಿರುವ ಪುಸ್ತಕ ನೋಡಿದ್ರೆ ಮೋದಿಯವರ ಅಂಧ ಅಭಿಮಾನಿಯಂತೆ ಕಾಣುತ್ತಾರೆ. ಇಂತಹ ಹೊಗಳುಭಟ್ಟರು ನಡೆಸಿರುವ ಸಮೀಕ್ಷೆ ಆಧರಿಸಿ ವರದಿ ಸಿದ್ಧಪಡಿಸಿರುವುದಕ್ಕೆ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿ ಕಾರಿದ್ದಾರೆ.
ಎಕ್ಸ್ ಖಾತೆಯಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಸಿಎಂ ಇವಿಎಂ ಸಮೀಕ್ಷೆ ವಿರುದ್ಧ ಕಿಡಿ ಕಾಡಿದ್ದಾರೆ. ಚುನಾವಣಾ ಆಯೋಗದ ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುವ ವ್ಯರ್ಥಪ್ರಯತ್ನ ರಾಜ್ಯದಲ್ಲಿ ವಿರೋಧಪಕ್ಷಗಳಿಂದ ನಡೆಯುತ್ತಿರುವುದು ವಿಷಾದನೀಯ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಚುನಾವಣಾ ಆಯೋಗದ ಹಳೆಯ ಸಮೀಕ್ಷೆಯೊಂದನ್ನು ಬಳಸಿಕೊಂಡು ಜನರ ದಾರಿತಪ್ಪಿಸುವ ವ್ಯರ್ಥಪ್ರಯತ್ನ ರಾಜ್ಯದಲ್ಲಿ ವಿರೋಧಪಕ್ಷಗಳಿಂದ ನಡೆಯುತ್ತಿರುವುದು ವಿಷಾದನೀಯ. ಚುನಾವಣಾ ಅಕ್ರಮಗಳ ಬಗ್ಗೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅದನ್ನು ‘ತಪ್ಪು’ ಎಂದು ಬಿಂಬಿಸುವ ಕುತಂತ್ರ ನಡೆಯುತ್ತಿದೆ. ಮಾಧ್ಯಮಗಳಲ್ಲಿ ವರದಿಯಾಗಿರುವ ಈ ಸುಳ್ಳು ಕಥನದ ವಿಶ್ವಾಸಾರ್ಹತೆಯನ್ನು ತುಸು ಆಳಕ್ಕೆ ಇಳಿದು ಪರಿಶೀಲಿಸಿದರೆ ಇದರ ಹಿಂದಿನ ದುರುದ್ದೇಶ ಸ್ಪಷ್ಟವಾಗುತ್ತದೆ.
