ಉದಯವಾಹಿನಿ, ಬಂಗಾಳ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೂ ಮುನ್ನ, ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯೆ ಮೌಸಮ್ ನೂರ್ ಅವರು ಕಾಂಗ್ರೆಸ್‌ ಪಕ್ಷಕ್ಕೆ ಮರಳಿದ್ದಾರೆ. ಪಕ್ಷದ ಪಶ್ಚಿಮ ಬಂಗಾಳ ಉಸ್ತುವಾರಿಗಳಾದ ಜೈರಾಮ್ ರಮೇಶ್ ಗುಲಾಮ್ ಅಹ್ಮದ್ ಮೀರ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಶುಭಂಕ‌ರ್ ಸರ್ಕಾರ್ ಅವರ ಸಮ್ಮುಖದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಅವರು ಕಾಂಗ್ರೆಸ್‌ಗೆ ಮರು ಸೇರ್ಪಡೆಗೊಂಡಿದ್ದಾರೆ. ಪಕ್ಷಕ್ಕೆ ಮರಳಿದ ನಂತರ ಮಾತನಾಡಿದ ಅವರು, ‘ಪಶ್ಚಿಮ ಬಂಗಾಳಕ್ಕೆ ಬದಲಾವಣೆ ಬೇಕಿದೆ.
ಅದು ನನ್ನಿಂದಲೇ ಆರಂಭವಾಗಲಿ. ನಾನು ಯಾವುದೇ ಷರತ್ತುಗಳಿಲ್ಲದೆ ಪಕ್ಷಕ್ಕೆ ಮರಳಿದ್ದೇನೆ’ ಎಂದು ಹೇಳಿದ್ದಾರೆ. ನೂ‌ರ್ ಅವರ ರಾಜ್ಯಸಭಾ ಅವಧಿಯು ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಲ್ದಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ. 2009 ಮತ್ತು 2019ರ ಅವಧಿಯಲ್ಲಿ ಅವರು ಕಾಂಗ್ರೆಸ್‌ನಿಂದ ಮಾಲ್ದಾ ದಕ್ಷಿಣ ಲೋಕಸಭಾ ಕ್ಷೇತ್ರ ಪತ್ರಿನಿಧಿಸಿ, ಸಂಸದರಾಗಿದ್ದರು. ಅಲ್ಲದೇ, ಪಶ್ಚಿಮ ಬಂಗಾಳದ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!