ಉದಯವಾಹಿನಿ, ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ವಿಕ್ಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆಯ ವಿರುದ್ಧ ಕಾಂಗ್ರೆಸ್ ಮೂರು ಹಂತದ ರಾಷ್ಟ್ರವ್ಯಾಪಿ ಆಂದೋಲನವನ್ನು ಪ್ರಕಟಿಸಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ , ದೇಶಾದ್ಯಂತ ಕಾಂಗ್ರೆಸ್ ನಡೆಸಲಿರುವ ಹೋರಾಟದ ಬಗ್ಗೆ ಮಾಹಿತಿ ನೀಡಿದರು. ಮನರೇಗಾ ಬಚಾವೋ ಸಂಗ್ರಾಮ ಹೆಸರಿನ ಈ ಆಂದೋಲನವು ಮಹಾತ್ಮ ಗಾಂಧೀಜಿ ಅವರ ಹೆಸರನ್ನು ತೆಗೆದುಹಾಕಿ, ಯೋಜನೆಯನ್ನು ಕೇಂದ್ರೀಕೃತಗೊಳಿಸುವ ಸರ್ಕಾರದ ನಡೆಯನ್ನು ವಿರೋಧಿಸುವುದು ಗುರಿಯಾಗಿದೆ ಎಂದು ಹೇಳಿದರು. ಮೋದಿ ಸರ್ಕಾರವು ಮನರೇಗಾ ಯೋಜನೆಯನ್ನು ಕೇಂದ್ರೀಕೃತಗೊಳಿಸಿ, ಗಾಂಧೀಜಿ ಅವರು ಕಾರ್ಮಿಕರ ಘನತೆ, ಗ್ರಾಮ ಸ್ವರಾಜ್ಯ ಮತ್ತು ರಾಷ್ಟ್ರದ ನೈತಿಕ ಜವಾಬ್ದಾರಿಯನ್ನು ನಾಶಪಡಿಸಿದೆ. ಈ ಕಾಯ್ದೆಯನ್ನು ಹಿಂಪಡೆಯಬೇಕು ಮತ್ತು ಮೂಲ ಮನರೇಗಾ ಕಾಯ್ದೆಯನ್ನು ಮರಳಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!