
ಉದಯವಾಹಿನಿ ಬೆಂಗಳೂರು: ನೈಸ್ ಅಕ್ರಮದ ಕುರಿತು ಬಿಜೆಪಿ ಸರ್ಕಾರ ತನಿಖೆ ಮಾಡಿದ್ದು, ಸದ್ಯದ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಆಗ್ರಹದ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ ಖಾರವಾದ ಪ್ರತಿಕ್ರಿಯೆ ನೀಡಿದ್ದು, ಬೆಳಕಿಗೆ ಬಂದಿದೆ.ನನಗೆ ಮಾಹಿತಿ ಇರುವ ಪ್ರಕಾರ ಇಡೀ ನೈಸ್ ಯೋಜನೆಗೆ ಸಹಿ ಹಾಕಿದ್ದೇ ಆಗಿನ ಮುಖ್ಯಮಂತ್ರಿ ಎಚ್.ಡಿ ದೇವೇಗೌಡರು. ಈ ಯೋಜನೆ ತಂದವರಾಗಿದ್ದು, ಈ ರಸ್ತೆಯಲ್ಲಿ ಅಕ್ರಮವಾಗಿದ್ದರೆ ಸ್ವತಃ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿದ್ದಾಗ ತನಿಖೆ ಮಾಡಿಸಬಹುದಿತ್ತು ಎಂದರು. ನಾವು ಯಾವುದೇ ಹಗರಣ ಮಾಡಿಲ್ಲ. ನಾವು ಈ ವಿಚಾರ ಸಕಾರಾತ್ಮಕವಾಗಿ ಪರಿಗಣಿಸುತ್ತೇವೆ. ತಪ್ಪು ನಡೆದಿದ್ದರೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.ಅನಗತ್ಯವಾಗಿ ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಅಧಿಕಾರ ಇದ್ದಾಗ ಏನೂ ಮಾಡದೇ ಈಗ ಅಧಿಕಾರ ಹೋದ ನಂತರ ಮಾತನಾಡಿದರೆ ಏನು ಪ್ರಯೋಜನ? ನಮಗೆ ರಾಜ್ಯ ಹಾಗೂ ಜನರ ಅಬಿವೃದ್ಧಿ ಮುಖ್ಯ ಎಂದು ತಿಳಿಸಿದರು.
