ಉದಯವಾಹಿನಿ : ಲಾಹೋರ್ : ವಿವಾಹಿತ ಮಹಿಳೆಗೆ ಬೇರೆ ಪುರುಷನೊಟ್ಟಿಗೆ ಅಕ್ರಮ ಸಂಬಂಧವಿತ್ತು, ಆತನ ಜತೆಯೇ ಇರಲಿ ಆಕೆ ಬಯಸಿದ್ದಳು. ಹಾಗಾಗಿ ಮೂವರು ಮಕ್ಕಳಿಗೆ ನಿದ್ರೆ ಮಾತ್ರೆ ಹಾಕಿ ಸಾಯಿಸಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಮದುವೆಯಾಗಲು ತನ್ನ ಮೂವರು ಚಿಕ್ಕ ಮಕ್ಕಳನ್ನು ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ. ಲಾಹೋರ್‌ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಪಂಜಾಬ್ ಪ್ರಾಂತ್ಯದ ಗುಜರಾತ್ ಜಿಲ್ಲೆಯ ಸರೈ ಅಲಮ್‌ಗಿರ್‌ನಲ್ಲಿ ಈ ಹತ್ಯೆ ನಡೆದಿದೆ. ಇಬ್ಬರು ಹೆಣ್ಣುಮಕ್ಕಳು ಮತ್ತು ಮೂರರಿಂದ ಏಳು ವರ್ಷದೊಳಗಿನ ಮಗನಿಗೆ ನಿದ್ರೆ ಮಾತ್ರೆಗಳನ್ನು ನೀಡಿ ನಂತರ ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ಆರೋಪಿಸಲಾಗಿದೆ.ಪೊಲೀಸರು ಆ ಮಹಿಳೆಯನ್ನು ಸಿದ್ರಾ ಬಶೀರ್ ಮತ್ತು ಆಕೆಯ ಸಹಚರ ಬಾಬರ್ ಹುಸೇನ್ ಎಂದು ಗುರುತಿಸಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ, ಇಬ್ಬರೂ ಸುಮಾರು ಒಂದೂವರೆ ವರ್ಷಗಳ ಹಿಂದೆ ಭೇಟಿಯಾಗಿದ್ದರು ಮತ್ತು ನಂತರ ಮದುವೆಯಾಗಲು ನಿರ್ಧರಿಸಿದ್ದರು.

ಮಹಿಳೆ ಪದೇ ಪದೇ ತನ್ನ ಪತಿಗೆ ವಿಚ್ಛೇದನ ಕೇಳುತ್ತಿದ್ದಳು ಮತ್ತು ಆಗಾಗ ಅವರೊಂದಿಗೆ ಜಗಳವಾಡುತ್ತಿದ್ದರು ಎಂದು ಪಿಟಿಐ ಉಲ್ಲೇಖಿಸಿ ಪೊಲೀಸ್ ಅಧಿಕಾರಿ ಒಮರ್ ಫಾರೂಕ್ ಹೇಳಿದ್ದಾರೆ. ಮಕ್ಕಳು ಜೀವಂತವಾಗಿರುವಾಗ ಮದುವೆಯಾಗಲು ಸಾಧ್ಯವಿಲ್ಲ ಎಂದು ಅವರಿಬ್ಬರು ಮಕ್ಕಳನ್ನು ಕೊಲ್ಲಲು ಪ್ಲ್ಯಾನ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಸಿದ್ರಾ ಮತ್ತು ಹುಸೇನ್ ಆ ಕಾರಣಕ್ಕಾಗಿ ಮಕ್ಕಳನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, ಇಬ್ಬರು ಹಣ್ಣಿನ ಚಾಟ್‌ನಲ್ಲಿ ಹೆಚ್ಚಿನ ಪ್ರಮಾಣದ ನಿದ್ರೆ ಮಾತ್ರೆಗಳನ್ನು ಬೆರೆಸಿ ಮಕ್ಕಳಿಗೆ ನೀಡಿದ್ದರು. ಮಕ್ಕಳು ಗಾಢ ನಿದ್ರೆಗೆ ಜಾರಿದ ನಂತರ, ಅವರನ್ನು ಒಬ್ಬೊಬ್ಬರಾಗಿ ಕತ್ತು ಹಿಸುಕಲಾಯಿತು.

Leave a Reply

Your email address will not be published. Required fields are marked *

error: Content is protected !!