ಉದಯವಾಹಿನಿ, ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಹಾಗೂ ಅಶ್ಲೀಲ ಸಂದೇಶಗಳ ಮೂಲಕ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಮೇಲೆ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ.
ವಿಜಯಲಕ್ಷ್ಮಿ ಅವರು 2025ರ ಡಿಸೆಂಬರ್ 24ರಂದು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ, ಕೆಲವು ವ್ಯಕ್ತಿಗಳು ತಮ್ಮನ್ನು ಮತ್ತು ಕುಟುಂಬವನ್ನು ಗುರಿಯಾಗಿಸಿಕೊಂಡು ಅಸಭ್ಯ ಕಾಮೆಂಟ್‌ಗಳು, ಅಶ್ಲೀಲ ಸಂದೇಶಗಳು ಹಾಗೂ ಬೆದರಿಕೆಗಳನ್ನು ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ರೀತಿಯ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಮಾನಸಿಕ ಒತ್ತಡಕ್ಕೆ ಕಾರಣವಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದು, ಇದೀಗ ತನಿಖೆಯ ಭಾಗವಾಗಿ ಜನವರಿ 4ರಂದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಲಾಗಿದೆ.
ಬಂಧಿತರನ್ನು ಹುಬ್ಬಳ್ಳಿಯ ಕೇಶವಾಪುರದ ಪೆಟ್ರೋಲ್ ಬಂಕ್ ವ್ಯವಸ್ಥಾಪಕ ನಾಗರಾಜ್ ಗುಳ್ಳಪ್ಪ ತಳವಾರ್ (23) ಹಾಗೂ ಧಾರವಾಡ ಜಿಲ್ಲೆಯ ಯಲವಾಲ್ ನಿವಾಸಿ ಲೆಕ್ಕಪರಿಶೋಧಕ ಪ್ರಶಾಂತ್ ತಳವಾರ್ (23) ಎಂದು ಗುರುತಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಮತ್ತು ಅವಮಾನಕಾರಿ ಸಂದೇಶಗಳನ್ನು ಹರಡಿದ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!