ಉದಯವಾಹಿನಿ, ಬೆಂಗಳೂರು: ಬಳ್ಳಾರಿ ಗಲಾಟೆ ‌ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಲವು ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿಯ ಗಲಾಟೆ ಪೂರ್ವ ನಿಯೋಜಿತವಾಗಿದ್ದು ಮೃತನ ಶವ ಪರೀಕ್ಷೆಯನ್ನು ಎರಡು ಬಾರಿ ಮಾಡಲಾಗಿದೆ. ಎರಡನೇ ಬಾರಿ ಯಾರ ಒತ್ತಡಕ್ಕೆ ಶವ ಪರೀಕ್ಷೆ ಮಾಡಿದ್ದಾರೆ? ಶವ ಪರೀಕ್ಷೆ ಮಾಡಲು ಅನುಮತಿ ಕೊಟ್ಟವರು ಯಾರು? ಯಾರ ಒತ್ತಡಕ್ಕೆ ಎರಡನೇ ಬಾರಿ ಶವ ಪರೀಕ್ಷೆ‌ ಮಾಡಿದ್ದಾರೆ? ಈ ಪ್ರಕರಣದ ತನಿಖೆಯ ಬಗ್ಗೆ ಅನುಮಾನವಿದ್ದು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದರು.
ಜನಾರ್ದನ ರೆಡ್ಡಿ ಮೇಲೆ ಆರೋಪ ಹೊರಿಸಲೆಂದೇ ಎರಡನೇ ಬಾರಿ ಶವ ಪರೀಕ್ಷೆ ಮಾಡಲಾಗಿದೆ ಎಂದು ಆರೋಪಿಸಿದ ಹೆಚ್‌ಡಿಕೆ, ಸಿದ್ದರಾಮಯ್ಯ ಅವರು ದೇವರಾಜ್ ಅರಸ್ ದಾಖಲೆಯ ಮುರಿದು ಸಾಧನೆ ಮಾಡಲು ಹೊರಟಿದ್ದಾರೆ. ಅವರ ಸಾಧನೆ ಮಣ್ಣು ಹೊಯ್ಯಿಕೊಳ್ಳಬೇಕು. ಸಿದ್ದರಾಮಯ್ಯ ಅವಧಿಯಲ್ಲಿ ಜನರ ರಕ್ಷಣೆ ಆಗಿಲ್ಲ. ಬಳ್ಳಾರಿಯಲ್ಲಿ ಗುಂಡಿನ ದಾಳಿ ನಡೆದಿದ್ದರೂ ಈ ಸರ್ಕಾರ ಕ್ರಮ ತೆಗೆದುಕೊಂಡಿಲ್ಲ. ರಾಜ್ಯದಲ್ಲಿ ಸರ್ಕಾರ ಬದುಕಿದೆಯಾ? ಸತ್ತು ಹೋಗಿದೆಯಾ ಎಂದು ಕಿಡಿಕಾರಿದರು.

Leave a Reply

Your email address will not be published. Required fields are marked *

error: Content is protected !!