ಉದಯವಾಹಿನಿ, ವೆನಿಜುವೆಲಾದ ಮೇಲೆ ಅಮೆರಿಕ ಸೇನೆಯ ದಾಳಿ ಮತ್ತು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಸೆರೆಹಿಡಿದಿರುವುದಕ್ಕೆ ಭಾರತ, ಚೀನಾ, ರಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ಟೀಕಿಸಿವೆ. ಭಾರತವೂ ತೀವ್ರ ಕಳವಳ ವ್ಯಕ್ತಪಡಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವಾಲಯ (ಎಂಇಎ), ವೆನಿಜುವೆಲಾದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಆ ದೇಶದ ಜನರ ಸುರಕ್ಷತೆಗೆ ಭಾರತ ಬದ್ಧವಾಗಿದೆ. ಸಮಸ್ಯೆಗಳನ್ನು ಪರಿಹರಿಸಲು ಶಾಂತಿಯುತ ಮಾತುಕತೆ ನಡೆಸಬೇಕು ಎಂದು ಒತ್ತಾಯಿಸಿದೆ.
‘ಕ್ಯಾರಕಸ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು, ಅಲ್ಲಿನ ಭಾರತೀಯರ ಸಂಪರ್ಕ ಸಾಧಿಸಿದೆ. ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ತಿಳಿಸಿದೆ. ದಕ್ಷಿಣ ಅಮೆರಿಕ ದೇಶದ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಅಲ್ಲಿಗೆ ಪ್ರಯಾಣಿಸದಂತೆ ಭಾರತೀಯರಿಗೆ ಶನಿವಾರ ಸಲಹೆ ನೀಡಿದೆ.
ವೆಜಿಜುವೆಲಾದಲ್ಲಿರುವ ಭಾರತೀಯರು ಜಾಗರೂಕರಾಗಿರಬೇಕು. ಕ್ಯಾರಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ. ಸಹಾಯಕ್ಕಾಗಿ ತುರ್ತು ಸಹಾಯವಾಣಿ ಸಂಖ್ಯೆಯನ್ನು ಬಳಸಿ ಎಂದು ಮನವಿ ಮಾಡಿದೆ.

Leave a Reply

Your email address will not be published. Required fields are marked *

error: Content is protected !!