
ಉದಯವಾಹಿನಿ : ನಂಬಿಕೆ ಕಳೆದುಕೊಂಡಾಗ ನಮಗೆ ದೇವರ ನೆನಪಾಗುತ್ತದೆ ದೇವರು ನನ್ನ ಜೀವನದಲ್ಲಿ ಎಷ್ಟೆಲ್ಲ ಆಟ ಆಡಿದನಲ್ಲ ಎನಿಸಬಹುದು. ಆಗೆಲ್ಲ ನಾವು ದೇವನೊಬ್ಬ ಜಾದೂಗಾರ ಎಂದುಕೊಳ್ಳುತ್ತೇವೆ. ಈಗ ಖಟ್ವಾಂಗ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಇದೇ ಹೆಸರನ್ನಿಟ್ಟು ಸಿನಿಮಾ ಒಂದು ಬರುತ್ತಿದೆ. ಸೌದಿ ಅರೇಬಿಯಾದಲ್ಲಿ ಉದ್ಯಮಿಯಾಗಿರುವ ಬಾಲಕೃಷ್ಣ ಶೆಟ್ಟಿ ಈ ಚಿತ್ರದ ನಿರ್ಮಾಣ ಮಾಡಿದ್ದಾರೆ. ದೊಡ್ಡ ತಾರಾಬಳಗವಿರೋ ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನ ಉತ್ಸವ ಲೆಗಸಿಯಲ್ಲಿ ಅದ್ದೂರಿಯಾಗಿ ನಡೆಯಿತು. ಕನ್ನಡದ ಹೆಸರಾಂತ ನಟಿ ಶ್ವೇತಾ ಶ್ರೀವಾಸ್ತವ್ ‘ದೇವನೊಬ್ಬ ಜಾದೂಗಾರ’ ಟೀಸರ್ ಬಿಡುಗಡೆ ಮಾಡಿದರು. ನಿರ್ದೇಶಕ ಸಿಂಪಲ್ ಸುನಿ ಮತ್ತು ಬಿಗ್ ಬಾಸ್ ಖ್ಯಾತಿಯ ಹುಚ್ಚ ವೆಂಕಟ್ ಕಾರ್ಯಕ್ರಮಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಹಾರೈಸಿದರು.
ನಿರ್ದೇಶಕ ವರುಣ್ ವಸಿಷ್ಠ ಅವರಿಗಾಗಿ ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಸಿನಿಮಾ ದಿನದಿಂದ ನನಗೆ ವರುಣ್ ಪರಿಚಯ ಇದೆ. ಅಂದಿನಿಂದ ಅವರಿಗೆ ದೊಡ್ಡ ಸಿನಿಮಾ ನಿರ್ದೇಶನ ಮಾಡಬೇಕು ಎಂದು ಕನಸಿತ್ತು. ಇಂದು ಅದು ನಿಜವಾಗಿದೆ. ಇಂದು ಈ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ನನಗೆ ಹೆಮ್ಮೆ ಎನಿಸುತ್ತದೆ. ಚಿತ್ರ ಉತ್ತಮವಾಗಿ ಹೆಸರು ತರಲಿ, ಭವಿಷ್ಯದಲ್ಲಿ ಮತ್ತಷ್ಟು ಒಳ್ಳೆಯ ಚಿತ್ರಗಳು ಈ ಬ್ಯಾನರ್ ನಲ್ಲಿ ಬರಲಿʼ ಎಂದು ಅವರು ಚಿತ್ರತಂಡಕ್ಕೆ ಶುಭ ಹಾರೈಸಿದರು. ಹೊಸ ವರ್ಷಕ್ಕೆ ಶುಭಾಶಯ ಕೋರುವುದರೊಡನೆ ಹೊಸ ಪ್ರತಿಭೆಗಳಿಗೆ ಹೊಸ ಪ್ರಯತ್ನಕ್ಕೆ ನಿರ್ದೇಶಕ ಸಿಂಪಲ್ ಸುನಿ ಮತ್ತು ಹುಚ್ಚ ವೆಂಕಟ್ ಶುಭಾಶಯ ಕೋರಿದರು
