
ಉದಯವಾಹಿನಿ , ಢಾಕಾ: ದುಬಾರಿ ಬೆಲೆಗೆ ಬಿಕರಿಯಾಗಿದ್ದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನ ಐಪಿಎಲ್‌ನಿಂದ ಹೊರದಬ್ಬಿದ ಬಳಿಕ ಬಾಂಗ್ಲಾದೇಶ ಹೊಸ ಕ್ಯಾತೆ ಶುರು ಮಾಡಿದೆ. ತನ್ನ ದೇಶಾದ್ಯಂತ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಸಾರ ನಿಷೇಧಿಸುವಂತೆ ಆದೇಶ ಹೊರಡಿಸಿದೆ.
ಅನಿರ್ದಿಷ್ಟಾವಧಿವರೆಗೆ ಐಪಿಎಲ್ ಪ್ರಸಾರ ನಿಷೇಧಿಸುವಂತೆ ಬಾಂಗ್ಲಾದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ದೇಶದ ಟಿವಿ ಚಾನೆಲ್‌ಗಳಿಗೆ ಸುತ್ತೋಲೆ ಹೊರಡಿಸಿದೆ. ಬಿಸಿಸಿಐ ನಿರ್ಧಾರದ ಹಿಂದೆ ಯಾವುದೇ ನಿರ್ದಿಷ್ಟ ಕಾರಣ ಇಲ್ಲ. ಮುಸ್ತಾಫಿಜುರ್ ರೆಹಮಾನ್ ಅವರನ್ನ ಐಪಿಎಲ್‌ನಿಂದ ಹೊರಗೆ ಕಳಿಸಿದ್ದು, ದೇಶದ ಜನರಿಗೆ ಅತೀವ ನೋವುಂಟು ಮಾಡಿದೆ. ಹೀಗಾಗಿ 2026 ರ ಮಾರ್ಚ್ 26 ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಪ್ರಸಾರ ನಿಲ್ಲಿಸಲಾಗುತ್ತಿದೆ ಎಂಧು ಸಚಿವಾಲಯ ಹೇಳಿದೆ.
ಮುಂದಿನ ಸೂಚನೆ ಬರುವವರೆಗೆ ಐಪಿಎಲ್‌ನ ಎಲ್ಲಾ ಪಂದ್ಯಗಳು ಹಾಗೂ ಕಾರ್ಯಕ್ರಮಗಳ ಪ್ರಸಾರ ನಿಲ್ಲಿಸುವಂತೆ ಸೂಚಿಸಲಾಗಿದೆ. ಬಿಸಿಸಿಐ ತನ್ನ ನಿರ್ಧಾರಕ್ಕೆ ಸೂಕ್ತ ಕಾರಣ ತಿಳಿಸಿಲ್ಲ. ಆದ್ರೆ ರೆಹಮಾನ್ ವಿಚಾರದಲ್ಲಿ ಕೈಗೊಂಡ ನಿರ್ಧಾರವು ಬಾಂಗ್ಲಾ ವಿರೋಧಿ ಭಾವನೆಗೆ ಪುಷ್ಠಿ ಕೊಟ್ಟಂತಾಗಿದೆ ಎಂದು ಅನ್ನೋದು ಬಾಂಗ್ಲಾದ ಆರೋಪ. ಬಾಂಗ್ಲಾದಲ್ಲಿ ಐಪಿಎಲ್ ಪ್ರಸಾರ ನಿಷೇಧಿಸಿರೋದ್ರಿಂದ ಆದಾಯದ ಮೇಲೆ ಯಾವುದೇ ಪರಿಣಾಮ ಬೀರೋದಿಲ್ಲ. ಏಕೆಂದ್ರೆ ಬಾಂಗ್ಲಾದ ಕ್ರಿಕೆಟ್‌ನ ವಾರ್ಷಿಕ ಆದಾಯ 423 ಕೋಟಿ ಇದ್ದರೆ, ಆರ್‌ಸಿಬಿ ಫ್ರಾಂಚೈಸಿಯ ಬ್ರ್ಯಾಂಡ್‌ವ್ಯಾಲ್ಯೂ 2,259 ಕೋಟಿ ರೂ. ಇದೆ. ಅಲ್ಲದೇ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್‌ನ ಬ್ರ್ಯಾಂಡ್ ವ್ಯಾಲ್ಯೂ 2024 ರಿಂದ 76,100 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಹೀಗಾಗಿ ಐಪಿಎಲ್ ಪ್ರಸಾರ ನಿಷೇಧದಿಂದ ಫ್ರಾಂಚೈಸಿಗಳಿಗಾಗಲಿ, ಬಿಸಿಸಿಐ ಆದಾಯದ ಮೇಲಾಗಲಿ ಯಾವುದೇ ಪರಿಣಾಮ ಬೀರೋದಿಲ್ಲ.
