ಉದಯವಾಹಿನಿ , ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನಿಗೆ ) ಇಬ್ಬರು ಚಾಕು ಇರಿದು ಪರಾರಿಯಾಗಿದ್ದಾರೆ.
ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್(32) ಮೇಲೆ ಚಾಕು ದಾಳಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಧ್ಯಾಹ್ನ ಕಾರು ನಿಲ್ಲಿಸಿ ಕೆಳಗೆ ನಿಂತಿದ್ದಾಗ ಈ ದಾಳಿ ನಡೆದಿದೆ.
ಬೈಕ್ ಮೇಲೆ ಬಂದು ಇಬ್ಬರು ಕಿಡಿಗೇಡಿಗಳು ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದಿದ್ದಾರೆ.
ಗಾಯಗೊಂಡ ಬಸವಂತ ಅವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಡಿಸಿಪಿ, ಎಸಿಪಿ ಹಾಗೂ ಮೃಣಾಲ್ ಹೆಬ್ಬಾಳ್ಕರ್ ಆಗಮಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಲವು ವರ್ಷಗಳಿಂದ ಬಸವಂತ ಕಡೋಲ್ಕರ್ ಮೃಣಾಲ್ ಅವರ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದ ಮಾಹಿತಿ ಲಭ್ಯವಾಗಿದೆ.
