ಉದಯವಾಹಿನಿ, ಇಂಫಾಲ್: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕ
ರಣದಲ್ಲಿ ಐದನೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. 19 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲಾಗಿರುವ ನಾಲ್ವರು ಆರೋಪಿಗಳನ್ನು 11 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
