ಉದಯವಾಹಿನಿ , ಚಿಕ್ಕಮಗಳೂರು: ಎನ್‌ಆರ್‌ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಯುವಕನೊಬ್ಬನಿಗೆ ಕೆಎಫ್‍ಡಿ ಸೋಂಕು ದೃಢವಾಗಿದೆ. ಈ ಮೂಲಕ ಗ್ರಾಮದ ಇಬ್ಬರಲ್ಲಿ ಸೋಂಕು ಪತ್ತೆಯಾದಂತಾಗಿದೆ. ಗ್ರಾಮದ 30 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಆತನನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬನಿಗೆ ಬೇರೆ ಅನಾರೋಗ್ಯದ ಕಾರಣ ಮಣಿಪಾಲ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಟ್ಟಿಮನೆ ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರಿಗೆ ಗ್ರಾಮದ ಶುಚಿತ್ವದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಸೂಚಿಸಿದ್ದಾರೆ.
ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಳ್ಕೋಡಿ ಗ್ರಾಮದ 6 ಮಂದಿಗೆ ಮಂಗನ ಕಾಯಿಲೆ ಕಾಣಿಸಿಕೊಂಡಿತ್ತು.

Leave a Reply

Your email address will not be published. Required fields are marked *

error: Content is protected !!