ಉದಯವಾಹಿನಿ , ದಾವಣಗೆರೆ: ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ದಾವಣಗೆರೆಯ ಶಿರಮಗೊಂಡನಹಳ್ಳಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಬೈಕ್ ಸವಾರ ಮಂಜುನಾಥ (27) ಮೃತ ಯುವಕ. ಗದಗ ಜಿಲ್ಲೆಯ ಶಿಂಗ್ಲಿ ಗ್ರಾಮದ ಯುವಕ ಬೈಕಿನಲ್ಲಿ ಬೆಂಗಳೂರಿಗೆ ಬರುತ್ತಿದ್ದಾಗ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.
ಡಿಕ್ಕೆ ಹೊಡೆದ ರಭಸಕ್ಕೆ ಮಂಜುನಾಥ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳಕ್ಕೆ ಸಂಚಾರಿ ಸಿಪಿಐ ಮಂಜುನಾಥ್ ಹಾಗೂ ದಕ್ಷಿಣ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
