ಉದಯವಾಹಿನಿ , ಢಾಕಾ: ಬಾಂಗ್ಲಾದೇಶದಲ್ಲಿ ದಿನಸಿ ಅಂಗಡಿಯ ಮಾಲೀಕನಾಗಿದ್ದ ಹಿಂದೂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಇದು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಎರಡನೇ ಘಟನೆಯಾಗಿದೆ. ಹತ್ಯೆಯಾದವರನ್ನು ಮೋನಿ ಚಕ್ರವರ್ತಿ ಎಂದು ಗುರುತಿಸಲಾಗಿದೆ. ಸೋಮವಾರ (ಜ.5) ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯಲ್ಲಿ ಅವರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದಾರೆ.

ಈ ಘಟನೆಗೂ ಕೆಲವು ಗಂಟೆಗಳ ಮೊದಲು, ಜಶೋರ್ ಜಿಲ್ಲೆಯಲ್ಲಿ ಕಾರ್ಖಾನೆ ಮಾಲೀಕರು ಹಾಗೂ ಪತ್ರಿಕೆಯೊಂದರ ಹಂಗಾಮಿ ಸಂಪಾದಕರೂ ಆಗಿದ್ದ ರಾಣಾ ಪ್ರತಾಪ್ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ನೆರೆಯ ಕೇಶಬ್‌ಪುರ ಉಪ ಜಿಲ್ಲೆಯ ಶಾಲಾ ಶಿಕ್ಷಕನ ಮಗ ಪ್ರತಾಪ್ ಎರಡು ವರ್ಷಗಳಿಂದ ಕೊಪಾಲಿಯಾ ಬಜಾರ್‌ನಲ್ಲಿ ಐಸ್ ಕಾರ್ಖಾನೆಯನ್ನು ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಸೋಮವಾರ ಸಂಜೆ ಕೆಲವು ವ್ಯಕ್ತಿಗಳು ಅವರನ್ನು ಐಸ್ ಫ್ಯಾಕ್ಟರಿಯಿಂದ ಹೊರಗೆ ಕರೆದೊಯ್ದು ಗುಂಡು ಹಾರಿಸಿದ್ದಾರೆ. ಪ್ರತಾಪ್ ದೇಹದ ಪಕ್ಕದಲ್ಲಿ ಏಳು ಗುಂಡುಗಳು ಪತ್ತೆಯಾಗಿವೆ. ತಲೆಗೆ ಮೂರು ಬಾರಿ ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!