ಉದಯವಾಹಿನಿ , ಟೆಹ್ರಾನ್ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ವಿರುದ್ಧ ಕಳೆದೊಂದು ವಾರದಿಂದಲೂ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸೆಯ ಸ್ವರೂಪ ಪಡೆದುಕೊಂಡಿದ್ದು, ಹಲವಾರು ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ಸಾವಿಗೆ ಕಾರಣವಾಗಿವೆ. ಈ ಹಿನ್ನೆಲೆ ಭಾರತವು ಇರಾನ್‌ಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆಯಿಂದ ಇರುವಂತೆ ಹಾಗೂ ಅನಗತ್ಯ ಪ್ರಯಾಣ ತಪ್ಪಿಸುವಂತೆ ಸಲಹೆ ನೀಡಿದೆ.
ಇರಾನ್‌ನ ಇಸ್ಲಾಮಿಕ್ ಆಡಳಿತದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದು, ಶಾಂತಯುತವಾಗಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ದಾಳಿ ನಡೆಸದಂತೆ ಕಳೆದ ವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೆಹ್ರಾನ್‌ಗೆ ಎಚ್ಚರಿಕೆ ನೀಡಿದ್ದರು. ಆದರೂ ದೇಶದಲ್ಲಿ ಪ್ರತಿಭಟನಾಕಾರರ ಹತ್ಯಾಕಾಂಡ ಮುಂದುವರಿದಿದೆ. “ಇರಾನ್ ಶಾಂತಿಪೂರ್ಣ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ಮಾಡಿ ಹಿಂಸಾತ್ಮಕವಾಗಿ ಹತ್ಯೆ ಮುಂದಾದರೆ, ಅಮೆರಿಕ ಸಂಯುಕ್ತ ಸಂಸ್ಥಾನವು ಪ್ರತಿಭಟನಾಕಾರರ ರಕ್ಷಣೆಗೆ ಬರಲಿದೆ” ಎಂದು ಟ್ರಂಪ್ ಹೇಳಿದ್ದರು.
