ಉದಯವಾಹಿನಿ, ಬೆಂಗಳೂರು: ಹುಬ್ಬಳ್ಳಿಯಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪವನ್ನ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅಲ್ಲಗೆಳೆದಿದ್ದಾರೆ. ಈ ಕುರಿತು ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ಎಸ್ಪಿ ಜೊತೆ ಮಾತನಾಡಿದ್ದೇನೆ. ಪೊಲೀಸರು 307 ಕೇಸಿನಲ್ಲಿ ಆ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ಆ ಸಂದರ್ಭದಲ್ಲಿ ಮಹಿಳೆಯ ತಾಯಿ ತಮ್ಮ ಜೊತೆಗಿದ್ದರು. ಮಹಿಳೆಯನ್ನು ಅರೆಸ್ಟ್ ಮಾಡಿದ ಮೇಲೆ ಆಕೆಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ ಎಂದರು.
ಬಟ್ಟೆ ಬಿಚ್ಚಿದ್ದನ್ನ ತಮ್ಮನೇ ವೀಡಿಯೋ ಮಾಡಿ ವೈರಲ್ ಮಾಡಿದ್ದಾನೆ. ಅಷ್ಟೇ ಅಲ್ಲ ಜಡ್ಜ್ ಮುಂದೆ ಪೊಲೀಸರು ದೌರ್ಜನ್ಯ ಮಾಡಿರೋ ಬಗ್ಗೆ ಮಹಿಳೆ ಏನು ಹೇಳಿರಲಿಲ್ಲ. ಕಾನೂನಿನ ಪ್ರಕಾರ ಏನು ಕ್ರಮ ಆಗಬೇಕೋ ಆಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
