ಉದಯವಾಹಿನಿ, ಲಕ್ನೋ: ಚುನಾವಣಾ ಆಯೋಗ ಉತ್ತರ ಪ್ರದೇಶ ವಿಶೇಷ ತೀವ್ರ ಪರಿಷ್ಕರಣೆಯ (SIR) ನಂತರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 2.89 ಕೋಟಿ ಮತದಾರರ ಹೆಸರುಗಳನ್ನು ಡಿಲೀಟ್‌ ಮಾಡಿದೆ. ರಾಜ್ಯದಲ್ಲಿ ಒಟ್ಟು 2.89 ಕೋಟಿ ಮತದಾರರ ಹೆಸರಗಳನ್ನು ಪಟ್ಟಿಯಿಂದ ತೆಗೆಯಲಾಗಿದೆ. ಅವರ ಪೈಕಿ 46 ಲಕ್ಷ ಮತದಾರರು ಮೃತಪಟ್ಟಿದ್ದಾರೆ. ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮತದಾರರ ಪಟ್ಟಿ ಪರಿಷ್ಕರಣೆಯು ಮೂರು ಬಾರಿ ವಿಸ್ತರಣೆಗೊಂಡಿತ್ತು.
2.17 ಕೋಟಿ ಜನರು ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ. 46.23 ಲಕ್ಷ ಜನರು ಮೃತಪಟ್ಟಿದ್ದಾರೆ. 25.47 ಲಕ್ಷ ಜನರು ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ನೋಂದಾಯಿಸಿಕೊಂಡಿದ್ದಾರೆ. ಅಂತಿಮ ಪಟ್ಟಿಯನ್ನು ಮಾರ್ಚ್ 6 ರಂದು ಪ್ರಕಟಿಸಲಾಗುವುದು.

ಅಧಿಕೃತ ಅಂಕಿಅಂಶಗಳ ಪ್ರಕಾರ, 2025ರ ಅ.27 ರಂದು ಎಸ್‌ಐಆರ್ ಘೋಷಿಸಿದಾಗ ಉತ್ತರ ಪ್ರದೇಶದಲ್ಲಿ ಸುಮಾರು 15.44 ಕೋಟಿ ನೋಂದಾಯಿತ ಮತದಾರರಿದ್ದರು. ಪ್ರತಿ ಮತದಾರರಿಗೂ ವೈಯಕ್ತಿಕ ಎಣಿಕೆ ನಮೂನೆಗಳನ್ನು ಮುದ್ರಿಸಲಾಗುತ್ತಿತ್ತು. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ-ಮನೆಗೆ ಪರಿಶೀಲನೆ ಮತ್ತು ಸಹಿ ಮಾಡಿದ ನಮೂನೆಗಳನ್ನು ಸಂಗ್ರಹಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದರು.

ಒಟ್ಟು ಮತದಾರರಲ್ಲಿ, 12,55,56,025 ಎಣಿಕೆ ನಮೂನೆಗಳನ್ನು ಹಿಂತಿರುಗಿಸಲಾಗಿದೆ. ಇದು ಶೇ.81.03 ರಷ್ಟು ಮತದಾರರನ್ನು ಒಳಗೊಂಡಿದೆ. ಆದಾಗ್ಯೂ, ಸುಮಾರು ಶೇಕಡಾ 18.7 ರಷ್ಟು ಮತದಾರರಿಂದ ನಮೂನೆಗಳನ್ನು ಸ್ವೀಕರಿಸಲಾಗಿಲ್ಲ. ಇದರಿಂದಾಗಿ 2.89 ಕೋಟಿ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ.

Leave a Reply

Your email address will not be published. Required fields are marked *

error: Content is protected !!