ಉದಯವಾಹಿನಿ, ಹೊಸವರ್ಷದ ಶುಭಾರಂಭದಂದು ಸಾಂಗ್ಸ್ ಪ್ರೀಮಿಯರ್ ಎನ್ನುವ ವರ್ಣರಂಜಿತ ಕಾರ್ಯಕ್ರಮದಲ್ಲಿ ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ ಕೊರಗಜ್ಜ ಚಿತ್ರದ ಎಲ್ಲಾ ಹಾಡುಗಳನ್ನು ನಮ್ಮ ಚಿತ್ರತಂಡ ಸುಮಾರು ಮುನ್ನೂರಕ್ಕೂ ಹೆಚ್ಚು ಆಡಿಯೋ ಪ್ಲಾಟ್‌ಫಾರ್ಮ್‌ಗಳಲ್ಲಿ ಝೀ ಮ್ಯೂಜಿಕ್ ಮುಖೇನ ಹರಿಯಬಿಟ್ಟಿತ್ತು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಹಾಲಿಡೇ ಇನ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಾವು ಚಿತ್ರದ ಹಾಡುಗಳಿಗೆ ರೀಲ್ಸ್ ಸ್ಪರ್ಧೆಯನ್ನು ಘೋಷಿಸಿದ್ದೇವೆಯೇ ಹೊರತು, ತ್ರಿವಿಕ್ರಮ ಸಪಲ್ಯ ನಿರ್ಮಾಣದಲ್ಲಿರುವ ಕೊರಗಜ್ಜ ಚಿತ್ರದ ದೈವದ ಬಗ್ಗೆ ರೀಲ್ಸ್ ಮಾಡಿ ಎಂದು ಹೇಳಿಲ್ಲ. ನಮ್ಮ ಮಾತನ್ನು ಕರ್ನಾಟಕದ ಕೆಲ ಭಾಗಗಳಲ್ಲಿ ತಪ್ಪಾಗಿ ಅರ್ಥೈಸಲಾಗಿದೆ ಎಂದು ನಿರ್ದೇಶಕ ಸುಧೀರ್‌ ಅತ್ತಾವರ್‌ ಸ್ಪಷ್ಟಪಡಿಸಿದ್ದಾರೆ.

ರೀಲ್ಸ್ ಎಂದರೆ ವೀಡಿಯೋ ತುಣುಕುಗಳು. ಈಗಾಗಲೇ ದೈವಗಳ ಬಗ್ಗೆ ಮತ್ತು ದೈವದ ಆರಾಧನಾ ಕ್ರಮಗಳಾದ ಕೋಲ, ನೇಮ, ತಂಬಿಲ, ಅಗೆಲು… ಹೀಗೆ ದೈವದ ವಿಚಾರವಾಗಿ ಸಹಸ್ರಾರು ರೀಲ್ಸ್‌ಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಹೀಗಿರುವಾಗ, ಚಿತ್ರದ ಹಾಡುಗಳಿಗೆ ರೀಲ್ಸ್ ಸ್ಪರ್ಧೆ ಏರ್ಪಡಿಸಿದರೆ ತಪ್ಪೇನು? ಆದಾಗ್ಯೂ ಅಶ್ಲೀಲ, ಅಸಂಬದ್ದ ಮತ್ತು ಅಪಹಾಸ್ಯ ಮಾಡುವ ರೀತಿಯ ರೀಲ್ಸ್‌ಗಳ ವಿರುದ್ಧ ಕಾನೂನು ಕ್ರಮ ಎದುರಿಸಬೇಕಾದೀತು ಎನ್ನುವ ಎಚ್ಚರಿಕೆಯನ್ನು ನಾವೀಗಾಗಲೇ ಕೊಟ್ಟಿದ್ದೇವೆ. ನಾವು ಕಳಸದಲ್ಲಿ ಶೂಟಿಂಗ್ ಮಾಡಿದಾಗ, ದೈವ ನರ್ತಕರೇ ಲಾಂಗು-ಮಚ್ಚು ತಂದು ಬೆದರಿಸಿ, ಶೂಟಿಂಗ್ ನಿಲ್ಲಿಸಿ, ಇಲ್ಲದ ರಗಳೆ ಮಾಡಿ ಲಕ್ಷಾಂತರ ರೂಪಾಯಿ ನಷ್ಟ ಮಾಡಿದ್ದರು. ಪ್ರತಿ ಬಾರಿ ‘ಕತ್ತಲೆ’ಯ ಹೆಸರನ್ನು ಹೇಳಿ ಬೆದರಿಸುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!