ಉದಯವಾಹಿನಿ , ರಾಮನಗರ: ಸಿದ್ದರಾಮಯ್ಯನವರ ಅವಶ್ಯಕತೆ ಈ ರಾಜ್ಯಕ್ಕೆ ಇದೆ. ಮುಂದೆಯೂ ಅವರ ಮಾರ್ಗದರ್ಶನದಲ್ಲೇ ಚುನಾವಣೆ ನಡೆಯಬೇಕಿದೆ ಎಂದು ಶಾಸಕ ಹೆಚ್‌ಸಿ ಬಾಲಕೃಷ್ಣ ಹೇಳಿದ್ದಾರೆ.

ಡಿಸಿಎಂ ಡಿಕೆಶಿಗೆ ಸಿಎಂ ಸ್ಥಾನ ನೀಡುವ ವಿಚಾರವಾಗಿ ಮಾಗಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ. ನಾನಾಗಲಿ, ಶಾಸಕರಾಗಲಿ ಸಿಎಂ ಮಾಡಲು ಆಗಲ್ಲ. ಸಿದ್ದರಾಮಯ್ಯ ಇರಬೇಕಾ, ಡಿಕೆಶಿಗೆ ಅವಕಾಶ ಕೊಡಬೇಕಾ ಎಂಬ ಬಗ್ಗೆ ವರಿಷ್ಠರು ನಿರ್ಧಾರ ಮಾಡುತ್ತಾರೆ. ಶೀಘ್ರದಲ್ಲೇ ಸಿಎಂ, ಡಿಸಿಎಂ ಇಬ್ಬರನ್ನೂ ಸಭೆ ಕರೆಯುವ ಸಾಧ್ಯತೆ ಇದೆ ಎಂದರು.
ಸಿದ್ದರಾಮಯ್ಯಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಕಾಂಗ್ರೆಸ್ ಪಕ್ಷಕ್ಕೆ ಬಂದಮೇಲೆ ಸಿಎಂ, ವಿಪಕ್ಷ ನಾಯಕ ಆಗಿದ್ದು. ಈಗ ನಮ್ಮ ಮನೆ ಯಜಮಾನ, ಪ್ರಶ್ನಾತೀತ ನಾಯಕ. ಅವರಿಗೆ ನಾಳೆಯೇ ಕೊಡಬೇಕು, ನಾಡಿದ್ದೇ ಕೊಡಬೇಕು ಅಂತ ಕೇಳಲು ಆಗಲ್ಲ. ಒಳ್ಳೆಯ ನಾಯಕತ್ವ, ಅವರಿಗೆ ಅವಕಾಶ ಕೊಡಲಿ ಎಂಬುದು ನಮ್ಮ ಅಭಿಪ್ರಾಯ. ಮುಂದಿನ ದಿನಗಳಲ್ಲಿ ಇದು ಪಕ್ಷ ಸಂಘಟನೆಗೆ ಅನುಕೂಲ ಆಗಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!