ಉದಯವಾಹಿನಿ, ಅಹಮದಾಬಾದ್‌: ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಕರ್ನಾಟಕ ತಂಡ, ಮಧ್ಯ ಪ್ರದೇಶ ವಿರುದ್ಧ 7 ವಿಕೆಟ್‌ಗಳಿಂದ ಸೋಲು ಅನುಭವಿಸಿತು. ಆ ಮೂಲಕ 2025-26ರ ಸಾಲಿನ ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಮಯಾಂಕ್‌ ಅಗರ್ವಾಲ್‌ ನಾಯಕತ್ವದ ಕರ್ನಾಟಕ ತಂಡಕ್ಕೆ ಮೊದಲನೇ ಸೋಲು ಇದಾಗಿದೆ. ಈ ಪಂದ್ಯವನ್ನು ಸೋತರೂ ಆರಂಭಿಕ ಆರು ಪಂದ್ಯಗಳ ಗೆಲುವಿನ ಆಧಾರದ ಮೇಲೆ ಕರ್ನಾಟಕ ತಂಡ ಎ ಗುಂಪಿನ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಪಡೆಯುವ ಮೂಲಕ ಕ್ವಾರ್ಟರ್‌ ಫೈನಲ್‌ಗೆ ಪ್ರವೇಶ ಮಾಡಿತು. ಈ ಪಂದ್ಯವನ್ನು ಗೆದ್ದ ಮಧ್ಯ ಪ್ರದೇಶ ತಂಡ ಎರಡನೇ ಸ್ಥಾನ ಪಡೆಯುವ ಮೂಲಕ ಅಂತಿಮ ಎಂಟರ ಘಟ್ಟಕ್ಕೆ ಅರ್ಹತೆ ಪಡೆಯಿತು.

ಇಲ್ಲಿನ ನರೇಂದ್ರ ಮೋದಿ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದಿದ್ದ ಟೂರ್ನಿಯ ಏಳನೇ ಸುತ್ತಿನ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಕರ್ನಾಟಕ ತಂಡಕ್ಕೆ ಮಯಾಂಕ್‌ ಅಗರ್ವಾಲ್‌ ಹಾಗೂ ದೇವದತ್‌ ಪಡಿಕ್ಕಲ್‌ 77 ರನ್‌ಗಳ ಜೊತೆಯಾಟವನ್ನು ಆಡುವ ಮೂಲಕ ಉತ್ತಮ ಆರಂಭವನ್ನುತಂದುಕೊಟ್ಟಿದ್ದರು. 39 ಎಸೆತಗಳಲ್ಲಿ 35 ರನ್‌ ಗಳಸಿದ್ದ ದೇವದತ್‌ ಪಡಿಕ್ಕಲ್‌ ವಿಕೆಟ್‌ ಒಪ್ಪಿಸಿದರು. ನಂತರ ಬಂದ ಕರುಣ್‌ ನಾಯರ್‌ 10 ರನ್‌ಗೆ ಔಟ್‌ ಆದರು. ಬಳಿಕ 49 ರನ್‌ ಗಳಿಸಿ ಆಡುತ್ತಿದ್ದ ನಾಯಕ ಮಯಾಂಕ್‌ ಅಗರ್ವಾಲ್‌ ಕೂಡ ದೊಡ್ಡ ಇನಿಂಗ್ಸ್‌ ಆಡುವಲ್ಲಿ ವಿಫಲರಾದರು.

Leave a Reply

Your email address will not be published. Required fields are marked *

error: Content is protected !!