ಉದಯವಾಹಿನಿ, ಸಿಡ್ನಿ: ಇಂಗ್ಲೆಂಡ್‌ ವಿರುದ್ಧ ಐದನೇ ಹಾಗೂ ಆಷಸ್‌ ಟೆಸ್ಟ್‌ ಸರಣಿಯ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ತಂಡದ ಗೆಲುವಿಗೆ ನೆರವು ನೀಡಿದ ಆರಂಭಿಕ ಬ್ಯಾಟ್ಸ್‌ಮನ್‌ ಟ್ರಾವಿಸ್‌ ಹೆಡ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸಿಡ್ನಿ ಪಂದ್ಯದ ಗೆಲುವಿನ ಮೂಲಕ ಆಸ್ಟ್ರೇಲಿಯಾ ತಂಡ ಟೆಸ್ಟ್‌ ಸರಣಿಯನ್ನು 4-1 ಅಂತರದಲ್ಲಿ ಮುಡಿಗೇರಿಸಿಕೊಂಡಿತು. ಈ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ 166 ಎಸೆತಗಳಲ್ಲಿ 163 ರನ್‌ಗಳನ್ನು ಗಳಿಸಿದ್ದ ಟ್ರಾವಿಸ್‌ ಹೆಡ್‌, ದ್ವಿತೀಯ ಇನಿಂಗ್ಸ್‌ನಲ್ಲಿ 35 ಎಸೆತಗಳಲ್ಲಿ 29 ರನ್‌ಗಳನ್ನು ಬಾರಿಸಿದ್ದರು. ಆ ಮೂಲಕ ಆಸ್ಟ್ರೇಲಿಯಾ ತಂಡದ ಗೆಲುವಿಗೆ ನೆರವು ನೀಡಿದ್ದಾರೆ. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ವಿರಾಟ್‌ ಕೊಹ್ಲಿಯ ದಾಖಲೆಯನ್ನು ಟ್ರಾವಿಸ್‌ ಹೆಡ್‌ ಮುರಿದಿದ್ದಾರೆ.

ಟ್ರಾವಿಸ್‌ ಹೆಡ್‌ ತಮ್ಮ ಟೆಸ್ಟ್‌ ವೃತ್ತಿ ಜೀವನದಲ್ಲಿ 11 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆಯುವಂತಾಯಿತು. ಆ ಮೂಲಕ ಟೀಮ್‌ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿಯ ಪಂದ್ಯ ಶ್ರೇಷ್ಠ ಪ್ರಶಸ್ತಿಗಳ ದಾಖಲೆಯನ್ನು ಹೆಡ್‌ ಮುರಿದಿದ್ದಾರೆ. ವಿರಾಟ್‌ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅಂದ ಹಾಗೆ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಸಂದರ್ಭದಲ್ಲಿ ವಿರಾಟ್‌ ಕೊಹ್ಲಿ ದೀರ್ಘಾವಧಿ ಸ್ವರೂಪಕ್ಕೆ ವಿದಾಯ ಹೇಳಿದ್ದರು.

ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದವರ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಹಾಗೂ ಆಲ್‌ರೌಂಡರ್‌ ಜಾಕ್‌ ಕಾಲಿಸ್‌ ಅಗ್ರ ಸ್ಥಾನದಲ್ಲಿದ್ದಾರೆ. ಇವರು ತಮ್ಮ ಟೆಸ್ಟ್‌ ವೃತ್ತಿ ಜೀವನದಲ್ಲಿ 23 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಕಾಲಿಸ್‌ ಆಡಿದ 166 ಟೆಸ್ಟ್‌ ಪಂ

Leave a Reply

Your email address will not be published. Required fields are marked *

error: Content is protected !!