ಉದಯವಾಹಿನಿ ಬೆಂಗಳೂರು : ಬಿಜೆಪಿ ಅವಧಿಯಲ್ಲಿ ನಡೆದ ಹಲವು ಪ್ರಕರಣಗಳ ಪೈಕಿ, ಪಿಎಸ್‌ಐ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ಬಿಜೆಪಿ ನಾಯಕರು ತೀವ್ರ ವಿರೋಧವನ್ನ ವ್ಯಕ್ತಪಡಿಸಿದ್ದಾರೆ. ಪಿಎಸ್ ಐ ಹಗರಣ ನ್ಯಾಯಾಂಗ ತನಿಖೆಗೆ ವಹಿಸಿದ್ದು,ದ್ಷೇಷದ ರಾಜಕಾರಣ ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ.ಇನ್ನೂ ಈ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣವನ್ನು ನ್ಯಾಯಾಂಗ ತನಿಖೆಗೆ ನೀಡಿದ್ದೇವೆ. ನ್ಯಾಯಾಂಗ ತನಿಖೆ ಆಗಬೇಕು ಎಂದು ಹಿಂದೆ ನಾವೇ ಹೇಳಿದ್ದೇವು. ಸತ್ಯಾಸತ್ಯತೆಗಳನ್ನು ಹೊರಗೆ ತರಬೇಕು ಎಂದು ಹೇಳಿದರು.ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣವನ್ನು ನ್ಯಾಯಾಂಗ ತನಿಖೆಗೆ ನೀಡಿದ್ದೇವೆ. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕ ಮಾಡಲಾಗಿದ್ದು, ಏಕ ಸದಸ್ಯತ್ವ ಸಮಿತಿ ತನಿಖೆ ನಡೆಸಲಿದೆ. ಸತ್ಯಾಸತ್ಯತೆಗಳನ್ನು ಹೊರಗೆ ತರಬೇಕು ಎಂದು ಕೊಟ್ಟಿದ್ದೇವೆ ಎಂದು ತನಿಖೆ ಬೇರೆ ಮಾಡುತ್ತೇವೆ, ನೇಮಕಾತಿಯ ಪ್ರಕ್ರಿಯೆ ಬೇರೆ ಮಾಡುತ್ತೇವೆ ಎಂದು ಹೇಳಿದ ಅವರು, ಈಗಾಗಲೇ ಇನ್ನೊಂದು ನೇಮಕಾತಿ ಆಗಬೇಕು. 400 ಹುದ್ದೆಗಳು ಖಾಲಿ ಇವೆ. ಅವುಗಳನ್ನು ನೇಮಕ ಮಾಡಬೇಕೆಂದರೂ ಈ ಪ್ರಕರಣ ಇತ್ಯರ್ಥ ಆಗಬೇಕು ಎಂದರು.ಇನ್ನೂ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವರಾದ ಪ್ರಿಯಾಂಕಾ ಖರ್ಗೆ ಅವರು,ಅವರ ಇಲಾಖೆ, ನಮ್ಮ ಇಲಾಖೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದೇವೆ. ಇಲಾಖೆಗಳ ಮಧ್ಯ ಸಮನ್ವಯ ಇರಬೇಕಲ್ವಾ. ಅದಕ್ಕೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿಕೆಗೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿ.ಕೆ.ಹರಿಪ್ರಸಾದ್ ಹಿರಿಯ ನಾಯಕರು. ಅವರು, ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಈ ವಿಚಾರದಲ್ಲಿ ನನಗೆ ಏನೂ ಗೊತ್ತಿಲ್ಲ. ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ, ಈ ಬಗ್ಗೆ ಅವರೇ ಉತ್ತರಿಸುತ್ತಾರೆ ಎಂದು ಹೇಳಿದರು.
