ಉದಯವಾಹಿನಿ, ಇತ್ತೀಚಿನ ದಿನಗಳಲ್ಲಿ ಜನರು ಪ್ಲಾಸ್ಟಿಕ್ ಕವರ್‌ ಮತ್ತು ಬಾಟಲಿಗಳ ಬಳಕೆಯನ್ನು ಕಡಿಮೆ ಮಾಡಿದ್ದಾರೆ. ಆದರೆ ಇದರಿಂದ ಪ್ಲಾಸ್ಟಿಕ್ ಮುಕ್ತ ಭಾರತ ನಮ್ಮದಾಗುತ್ತದೆ ಎಂಬುದು ತಪ್ಪು ಕಲ್ಪನೆ. ಮೈಕ್ರೋಪ್ಲಾಸ್ಟಿಕ್‌ ಕಣಗಳು ಈಗಾಗಲೇ ಎಲ್ಲೆಡೆ ಹರಡಿದ್ದು, ನಾವು ದಿನನಿತ್ಯ ಬಳಸುವ ಉಪ್ಪಿನಿಂದ ಹಿಡಿದು ಕುಡಿಯುವ ನೀರಿನವರೆಗೆ ಈ ಮೈಕ್ರೋಪ್ಲಾಸ್ಟಿಕ್‌ಗಳು ನಮ್ಮ ಆಹಾರವನ್ನು ಪ್ರವೇಶಿಸಿದೆ. ಹಾಗಾಗಿ ಈ ಬಗ್ಗೆ ಇನ್ನಾದರೂ ಗಮನಹರಿಸಬೇಕಾಗಿದೆ. ಇಲ್ಲವಾದಲ್ಲಿ ಮುಂದೊಂದು ದಿನ ಇದರಿಂದ ಅಪಾಯ ಕಟ್ಟಿಟ್ಟ ಬುತ್ತಿ. ಹಾಗಾದರೆ ಮೈಕ್ರೋಪ್ಲಾಸ್ಟಿಕ್‌ ಕಣಗಳು ಹೇಗೆ ನಮ್ಮ ಆಹಾರದಲ್ಲಿ ಸೇರಿಕೊಳ್ಳುತ್ತದೆ, ಅವುಗಳಿಂದ ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ, ಅದನ್ನು ಹೇಗೆ ತಡೆಯಬಹುದು ಎಂಬುದರ ಬಗ್ಗೆ ತಿಳಿಯುವುದು ಬಹಳ ಅನಿವಾರ್ಯ. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

5 ಮಿಲಿಮೀಟರ್‌ಗಿಂತ ಚಿಕ್ಕದಾದ ಪ್ಲಾಸ್ಟಿಕ್ ಕಣಗಳನ್ನು ಮೈಕ್ರೋಪ್ಲಾಸ್ಟಿಕ್‌ ಎನ್ನಲಾಗುತ್ತದೆ. ಕೈಗಾರಿಕಾ ತ್ಯಾಜ್ಯ, ಪ್ಲಾಸ್ಟಿಕ್ ಪ್ಯಾಕೆಟ್‌ಗಳಲ್ಲಿ ಆಹಾರ ಸಂಗ್ರಹಣೆ, ಜಲ ಮಾಲಿನ್ಯ ಹೀಗೆ ನಾನಾ ರೀತಿಯ ಕಾರಣಗಳಿಂದ, ಅವು ನಮ್ಮ ಆಹಾರ ಸರಪಳಿಯನ್ನು ಪ್ರವೇಶಿಸುತ್ತಿವೆ. ಪ್ಯಾಕ್ ಮಾಡಿದ ಆಹಾರಗಳಲ್ಲಿ ಅವುಗಳ ಸಾಂದ್ರತೆ ಹೆಚ್ಚಾಗಿದ್ದು ಇವುಗಳನ್ನು ತಡೆಗಟ್ಟಲು, ಆಹಾರ ಶೇಖರಣಾ ವಿಧಾನಗಳಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗಿದೆ.
ಮೀನು ಮತ್ತು ಸೀಗಡಿ ತಿನ್ನಲು ಇಷ್ಟಪಡುವವರು ಸೀಗಡಿಗಳಂತಹ ಚಿಪ್ಪುಗಳನ್ನು ಹೊಂದಿರುವ ಜೀವಿಗಳು ಸಮುದ್ರದಿಂದ ಹೆಚ್ಚು ಮೈಕ್ರೋಪ್ಲಾಸ್ಟಿಕ್‌ಗಳನ್ನು ಹೀರಿಕೊಳ್ಳುತ್ತವೆ. ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ಕುಡಿಯುವುದನ್ನು ತಪ್ಪಿಸಿ
ಅನೇಕರು ಪ್ರಯಾಣ ಮಾಡುವಾಗ ಪ್ಲಾಸ್ಟಿಕ್ ಬಾಟಲಿಗಳನ್ನು ಖರೀದಿಸಿ ಅದರಲ್ಲಿ ಶೇಖರಿಸಿಟ್ಟ ನೀರನ್ನು ಕುಡಿಯುತ್ತಾರೆ. ಆದರೆ ಆ ಬಾಟಲಿಗಳಿಂದ ಮೈಕ್ರೋಪ್ಲಾಸ್ಟಿಕ್‌ಗಳು ನೀರಿನಲ್ಲಿ ಬೆರೆತುಹೋಗಿರುತ್ತದೆ. ಬದಲಾಗಿ, ಕಾರ್ಬನ್ ಅಥವಾ ಯುಎಫ್ ಫಿಲ್ಟರ್‌ಗಳ ಮೂಲಕ ಫಿಲ್ಟರ್ ಮಾಡಿದ ನೀರನ್ನು ಕುಡಿಯುವುದು ಉತ್ತಮ. ಈ ನೀರನ್ನು ಸಂಗ್ರಹಿಸಲು, ಪ್ಲಾಸ್ಟಿಕ್ ಬಾಟಲಿಗಳ ಬದಲಿಗೆ ಸ್ಟೇನ್‌ಲೆಸ್ ಸ್ಟೀಲ್ ಬಾಟಲಿಗಳು ಅಥವಾ ಮಣ್ಣಿನ ಮಡಕೆಗಳನ್ನು ಬಳಸಬಹುದು.

Leave a Reply

Your email address will not be published. Required fields are marked *

error: Content is protected !!