ಉಯವಾಹಿನಿ, ಲಕ್ನೋ: ಅಯೋಧ್ಯೆ ಆಡಳಿತ ಮಂಡಳಿಯು ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥಗಳ ವಿತರಣೆಯನ್ನ ನಿಷೇಧಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಆನ್‌ಲೈನ್ ವೇದಿಕೆಗಳ ಮೂಲಕ ಪದೇ ಪದೇ ಮಾಂಸಾಹಾರ ಪದಾರ್ಥಗಳನ್ನ ಪೂರೈಕೆ ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿಬಂದ ಹಿನ್ನೆಲೆ ʻಪಂಚಕೋಶ ಪರಿಕ್ರಮʼದ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. ಅಯೋಧ್ಯೆಯಲ್ಲಿನ ಕೆಲವು ಹೋಟೆಲ್‌ಗಳು ಮತ್ತು ಹೋಂ ಸ್ಟೇಗಳು (Homestays) ಅತಿಥಿಗಳಿಗೆ ಮಾಂಸಾಹಾರ ಮತ್ತು ಮದ್ಯ ಪೂರೈಕೆ ಮಾಡುತ್ತಿವೆ ಎನ್ನುವ ಆರೋಪ ಕೇಳಿಬಂದಿದೆ. ಅಂತಹ ಚಟುವಟಿಕೆಗಳಿಂದ ದೂರ ಇರುವಂತೆ ಅಧಿಕಾರಿಗಳು ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
