ಉದಯವಾಹಿನಿ, ಕಲಬುರಗಿ: ಜೆಡಿಎಸ್‌ನವರು ತಮ್ಮ ಪಕ್ಷವನ್ನೇ ಮಾರಾಟಕ್ಕೆ ಇಟ್ಟಿದ್ದಾರೆ ಅಂತಹವರು ಸಿಎಂ ಲೀಸ್ ಪಿರಿಡ್ ಬಗ್ಗೆ ಮಾತನಾಡುತ್ತಿದ್ದಾರೆ ಅಂತಾ ಸಚಿವ ಪ್ರಿಯಾಂಕ್ ಖರ್ಗೆ , ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯ ಜೆಡಿಎಸ್ ಪಕ್ಷವನ್ನ ಬಿಜೆಪಿ ಅಕ್ರಮ ಸಕ್ರಮವಾಗಿ ಮಾಡಿಕೊಂಡಿದ್ದಾರೆ. ಆದರೆ ಜೆಡಿಎಸ್ ನವರು ಸೇಲ್ ಡೀಡ್ ನಮ್ಮಕಡೆಯಿದೆ ಅಂತಾ ಕುಳಿತ್ತಿದ್ದಾರೆ ಎಂದು ಕುಟುಕಿದ್ದಾರೆ. ಈಗಾಗಲೇ ಜೆಡಿಎಸ್ ಫ್ಲಾಟ್ ನಲ್ಲಿ ಬಿಜೆಪಿಯವರು (BJP) ಬಹುಮಹಡಿ ಕಟ್ಟಡವನ್ನೇ ಕಟ್ಟಿದ್ದಾರೆ. ಕುಮಾರಸ್ವಾಮಿ ಹಿಂದೆ ಸಹ ರಾಜ್ಯ ರಾಜಕಾರಣದಲ್ಲಿದ್ರು ಆಗಲೂ ಏನೂ ಆಗಿಲ್ಲ. ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನೂ ಬಿಜೆಪಿಯವರು ಬಳ್ಳಾರಿ ಪಾದಯಾತ್ರೆ ಯಾಕೆ ಕಲಬುರಗಿ ಪಾದಯಾತ್ರೆ ಸಹ ಮಾಡಲ್ಲಿ, ಅಂತಾ ಬಿಜೆಪಿ ನಾಯಕರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.
