ಉದಯವಾಹಿನಿ, ದಾವಣಗೆರೆ: ಬಿಜೆಪಿ  ಮುಖಂಡರೊಬ್ಬರು ಕೌಟುಂಬಿಕ ಕಲಹಕ್ಕೆ ಬೇಸತ್ತು ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ಹೊರ ವಲಯದ ನಾಗನೂರು ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಚಂದ್ರಶೇಖರ್ ಸಂಕೋಳ್ ಎಂದು ಗುರುತಿಸಲಾಗಿದೆ. ಆಸ್ತಿಯಲ್ಲಿ ಕೂಡ ಸ್ಥಿತಿವಂತರಾಗಿದ್ದ ಚಂದ್ರಶೇಖರ್ ಸಂಕೋಳ್, ಮನುಷ್ಯರಿಗೆ ಅಷ್ಟೇ ಅಲ್ಲ ಪ್ರಾಣಿ ಪಕ್ಷಿಗಳಿಗೂ ಕೂಡ ಅನ್ನದಾತನಾಗಿದ್ದರು. ಅಲ್ಲದೇ ಸಾಕಷ್ಟು ಸಮಾಜ ಸೇವೆ ಮಾಡುವ ಮೂಲಕ ಸಮಾಜದಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ. ಇಂತಹ ವ್ಯಕ್ತಿ ಕೌಟುಂಬಿಕ ಕಲಹಕ್ಕೆ ಮನನೊಂದು ಅತ್ಮಹತ್ಯೆ ದಾರಿ ಹಿಡಿದಿದ್ದಾರೆ. ಅವರದ್ದೇ ಜಮೀನಿನಲ್ಲಿ ಕಾರಿನಲ್ಲಿ ಕೂತು ಜೊತೆಗೆ ಟಯರ್‌ಗಳನ್ನಿಟ್ಟು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಾಮನೂರು ಗ್ರಾಮದಲ್ಲಿ ಸಿಮೆಂಟ್, ಕಬ್ಬಿಣದ ಅಂಗಡಿಯನ್ನು ನಡೆಸುತ್ತಾ ಅವರು ಇಡೀ ಜಿಲ್ಲೆಗೆ ಹೆಸರುವಾಸಿಯಾಗಿದ್ದರು. ಅಲ್ಲದೇ ಬಿಜೆಪಿಯ ಪ್ರಮುಖ ಮುಂಖಂಡನಾಗಿ ಪಕ್ಷ ಸಂಘಟನೆಯಲ್ಲಿ ಕೂಡ ಹೆಚ್ಚು ತೊಡಗಿಸಿಕೊಂಡಿದ್ದರು. ಅಡಿಕೆ ತೋಟ, ಕಾಂಪ್ಲೆಕ್ಸ್ ಗಳನ್ನು ಕೂಡ ಹೊಂದಿದ್ದ ಚಂದ್ರಶೇಖರ್, ಸಾಲ ಮಾಡಿಕೊಂಡಿದ್ದರು, ಇದರಿಂದ ಮನೆಯಲ್ಲಿ ಜಗಳವಾಗುತ್ತಿತ್ತು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!