ಉದಯವಾಹಿನಿ, ಬೆಂಗಳೂರು: ಮುಂಬರುವ ಮಾರ್ಚ್‌ ತಿಂಗಳಿನಲ್ಲಿ ಬಜೆಟ್‌ ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್‌ 6ರಂದು ಬಜೆಟ್‌ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್ 5 ರಿಂದ ಬಜೆಟ್ ಅಧಿವೇಶನ ಶುರುವಾಗುವ ಸಾಧ್ಯತೆ ಇದೆ. ಅಂದು ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಮಾರ್ಚ್ 6 ರಂದು ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಿತ್ತಾಟದ ನಡುವೆಯೂ ಸಿದ್ದರಾಮಯ್ಯ ದಾಖಲೆ ಬಜೆಟ್‌ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. 16 ಬಜೆಟ್‌ಗಳನ್ನ ಈಗಾಗಲೇ ಮಂಡಿಸಿದ್ದು, ಮಾರ್ಚ್‌ 6ರಂದು ಮಂಡಿಸುವ ಬಜೆಟ್‌ 17ನೇ ಬಜೆಟ್‌ ಆಗಲಿದೆ.

ಇನ್ನೂ 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರ ಭಾನುವಾರ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!