ಉದಯವಾಹಿನಿ, ಗಾಂಧಿನಗರ: ಮೂರು ದಿನಗಳ ಕಾಲ ತವರು ರಾಜ್ಯ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಐತಿಹಾಸಿಕ ಸೋಮನಾಥ ದೇವಾಲಯದಲ್ಲಿ ವೀಶೇಷ ಪೂಜೆ ಸಲ್ಲಿಸಿದ್ದು, ದೇಶದ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಜ್ಯೋತಿರ್ಲಿಂಗಗಳಲ್ಲಿ ಒಂದಾದ ಗುಜರಾತ್‌ನ (Gujarat) ಶ್ರೀ ಸೋಮನಾಥ ದೇವಾಲಯದ ಮೇಲೆ 1026 ರ ಜನವರಿಯಲ್ಲಿ ಮಹ್ಮದ್ ಘಜ್ನಿ ಮೊದಲ ಬಾರಿಗೆ ದಾಳಿ ನಡೆಸಿ 1,000 ವರ್ಷಗಳು ಕಳೆದಿವೆ. 1 ಸಾವಿರ ವರ್ಷಗಳ ನಂತರವೂ ಸೋಮನಾಥದ ಭವ್ಯತೆ ಮರುಸ್ಥಾಪಿಸಲು ನಡೆದ ಹಲವಾರು ಪ್ರಯತ್ನಗಳ ಫಲವಾಗಿ ಈ ದೇವಾಲಯವು ಇಂದಿಗೂ ವೈಭವದಿಂದ ಕಂಗೊಳಿಸುತ್ತಿದೆ. ಹಾಗಾಗಿ ದೇವಾಲಯದ ಮೇಲೆ ನಡೆದ ಮೊದಲ ದಾಳಿಯ ಸಾವಿರ ವರ್ಷಾಚರಣೆ ಭಾಗವಾಗಿ ʻಸೋಮನಾಥ ಸ್ವಾಭಿಮಾನ ಪರ್ವʼ (ಕಾರ್ಯಕ್ರಮ ಆಯೋಜಿಸಲಾಗಿದೆ.
ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮವಾದ ಭಾಗವಾಗಿ ನಡೆಯುತ್ತಿರುವ ಸೋಮನಾಥ ಸ್ವಾಭಿಮಾನ್ ಪರ್ವ್ ಕಾರ್ಯಕ್ರಮಲ್ಲಿ ಪಾಲ್ಗೊಂಡು ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಾರ್ಥನೆ ಬಳಿಕ ದೇವಾಲಯದಲ್ಲಿ ನಡೆದ ‘ಓಂಕಾರ ಮಂತ್ರ’ ಪಠಣದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.
