ಉದಯವಾಹಿನಿ,
ಹೈದರಾಬಾದ್: ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿರುವ ಘಟನೆ ಆಂಧ್ರಪ್ರದೇಶದ ವೈಎಸ್‍ಆರ್ ಜಿಲ್ಲೆಯಲ್ಲಿ ನಡೆದಿದೆ. ವೈಎಸ್‍ಆರ್ ಜಿಲ್ಲೆಯ ಚಿನ್ನಒರಂಪಾಡು ಎಂಬಲ್ಲಿ ಲಾರಿಗೆ ಬಸ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ದುರಂತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಜಂಪೇಟೆ ಠಾಣೆ ಎಸ್ಪಿ ಚೈತನ್ಯ ತಿಳಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
