ಉದಯವಾಹಿನಿ, ಇತ್ತೀಚೆಗೆ ನಟ ರಕ್ಷಿತ್ ಶೆಟ್ಟಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಮುಂಬರುವ ಸಿನಿಮಾಗಳ ಸ್ಕ್ರಿಪ್ಟ್ ಕೆಲಸದಲ್ಲಿ ರಕ್ಷಿತ್ ಶೆಟ್ಟಿ ಅವರು ಬ್ಯುಸಿಯಾಗಿದ್ದಾರೆ.
ಇದೀಗ ಉಡುಪಿ ತಾಲೂಕಿನ ಅಲೆವೂರಿನ ಕಲ್ಯಾಣ ನಗರದಲ್ಲಿ ನೇಮೋತ್ಸವ ನಡೆದಿದೆ. ಈ ನೇಮೋತ್ಸವದಲ್ಲಿ ರಕ್ಷಿತ್ ಭಾಗಿಯಾಗಿದ್ದಾರೆ. ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.
ಈ ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವವನ್ನು ಅಲೆವೂರು ದೊಡ್ಡಮನೆ ಮನೆತನದವರು ನಿರ್ವಹಿಸುತ್ತಾರೆ. ನಟ ರಕ್ಷಿತ್ ಶೆಟ್ಟಿಯವರು ಅಲೆವೂರು ದೊಡ್ಡಮನೆ ಕುಟುಂಬದ ಕುಡಿ. ಈ ಬಾರಿಯೂ ತಂದೆ ತಾಯಿ ಕುಟುಂಬದವರ ಜೊತೆ ರಾತ್ರಿ ನಡೆದ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ.
ರಕ್ಷಿತ್ ಶೆಟ್ಟಿಯವರು ರನ್ ಆಂಟನಿ ಚಿತ್ರದ ಕಥೆ ಬರೆದುಕೊಂಡು ಅಮೆರಿಕದಲ್ಲಿ ಕುಳಿತಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದೀಗ ಅವರು ಊರಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ.
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಮತ್ತು ಬಿ ರಿಲೀಸ್ ಆದ ನಂತರ ಕಣ್ಮರೆಯಾಗಿರುವ ನಟ ರಕ್ಷಿತ್ ಶೆಟ್ಟಿ ಅವರು ತಮ್ಮ ಮುಂದಿನ ಬಹುನಿರೀಕ್ಷಿತ ರಿಚರ್ಡ್ ಆ್ಯಂಟೋನಿ ಚಿತ್ರೀಕರಣವನ್ನು ಯಾವಾಗ ಪ್ರಾರಂಭಿಸುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.
ಮುಂಬರುವ ಹಲವಾರು ಯೋಜನೆಗಳಲ್ಲಿ ರಕ್ಷಿತ್ ಬ್ಯುಸಿಯಾಗಿದ್ದು, ‘ರಿಚರ್ಡ್ ಆ್ಯಂಟೋನಿ, ಪುಣ್ಯಕೋಟಿ ಮತ್ತು ಮಿಡ್‌ವೇ ಟು ಮೋಕ್ಷನಂತಹ ಚಿತ್ರಗಳು ಶೀಘ್ರದಲ್ಲೇ ನಿರ್ಮಾಣವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *

error: Content is protected !!