ಉದಯವಾಹಿನಿ, ಕರಿಕಾಡʼ ಸಿನಿಮಾ ಟೈಟಲ್‌ನಿಂದಲೇ ಗಮನ ಸೆಳೆಯುತ್ತಿದೆ. ವಿಭಿನ್ನಾವಾದ ಕಥಾಹಂದರ. ಇದೊಂದು ಮ್ಯೂಸಿಕಲ್ ಜರ್ನಿಯ ಜೊತೆಗೆ ಅಡ್ವೆಂಚರಸ್ ಎಲಿಮೆಂಟ್ಸ್ ಇಟ್ಟುಕೊಂಡು ಮಾಡಿರುವ ಸಿನಿಮಾ. 3 ತಿಂಗಳ ಹಿಂದೆ ಟೈಟಲ್ ಟೀಸರ್ ರಿಲೀಸ್ ಮಾಡಿ ಕರಿಕಾಡ ಚಿತ್ರತಂಡ ಸದ್ದು ಮಾಡಿತ್ತು. ಇದೀಗ ʻರತುನಿ ರತುನಿʼ ಹಾಡಿನ ಮೂಲಕ ಗಮನ ಸೆಳೆದಿದೆ.
ಯುವ ಪ್ರತಿಭೆಗಳ ಕರಿಕಾಡ ಸಿನಿಮಾದ ಟೀಸರ್ ಹೊಸ ಭರವಸೆ ಹುಟ್ಟಿಸಿದೆ. ಸಾಹಸಮಯ ದೃಶ್ಯಕಾವ್ಯವಾಗಿ, ಪ್ರೇಮಕಥೆಯ ರೂಪಕವಾಗಿ, ನಮ್ಮ ಮಣ್ಣಿನ ಸೊಗಡನ್ನ ಸೂಸುವಂತಹ ಕಥಾಹಂದರ ಹೊಂದಿದೆ. ಇಷ್ಟೇ ಅಲ್ಲದೆ ಇದೊಂದು ರಿವೇಂಜ್ ಸ್ಟೋರಿಯಂತೆ ಎದ್ದು ಕಾಣುತ್ತಿದೆ. ಇಷ್ಟೇ ಅಲ್ಲದೇ ಸಿನಿಮಾ ಕಥೆಯ ಜೊತೆಗೆ ತಾಂತ್ರಿಕತೆಯಲ್ಲಿಯೂ ಗಮನ ಸೆಳೆದಿದೆ.
ಈ ಸಿನಿಮಾದಲ್ಲಿ ಕಾಡ ನಟರಾಜ್ ನಾಯಕ ನಟನಾಗಿ ನಟಿಸಿದ್ದಾರೆ. ಇವರೊಂದಿಗೆ ಪ್ರಮುಖ ಪಾತ್ರದಲ್ಲಿ ಬಲರಾಜವಾಡಿ, ಯಶ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ತುಳು ಚಿತ್ರರಂಗದ ಚೆಲುವೆ ನಿರೀಕ್ಷಾ ಶೆಟ್ಟಿ ನಾಯಕಿಯಾಗಿದ್ದಾರೆ. ಉಳಿದಂತೆ ಈ ಸಿನಿಮಾದಲ್ಲಿ ಮಂಜು ಸ್ವಾಮಿ, ಗೋವಿಂದ ಗೌಡ , ದೀವಾಕರ್, ಕಾಮಿಡಿ ಕಿಲಾಡಿ ಸೂರ್ಯ, ದಿ.ರಾಕೇಶ್ ಪೂಜಾರಿ, ವಿಜಯ್ ಚಂಡೂರು, ಚಂದ್ರಪ್ರಭ, ಕರಿಸುಬ್ಬು, ಗಿರಿ, ಮಾಸ್ಟರ್ ಆರ್ಯನ್, ಬಾಲನಟಿ ರಿದ್ಧಿ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ. ಇನ್ನು ಈ ಸಿನಿಮಾವನ್ನು ರಿದ್ಧಿ ಎಂಟರ್ಟೈನ್ಮೆಂಟ್ಸ್ ಬ್ಯಾನರ್ನಲ್ಲಿ ಕಾಡ ನಟರಾಜ್ ಅವರ ಪತ್ನಿ ದೀಪ್ತಿ ದಾಮೋದರ್ ನಿರ್ಮಾಣ ಮಾಡಿದ್ದಾರೆ. ಪತಿಯ ಕನಸಿನ ಈ ಸಿನಿಮಾ ಮೂಲಕ ಈಡೇರಿಸಿದ್ದಾರೆ. ಇನ್ನು ಇವರ ಕನಸಿಗೆ ಸ್ನೇಹಿತ ರವಿಕುಮಾರ್ ಎಸ್.ಆರ್ ಸಹ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ.
