ಉದಯವಾಹಿನಿ, ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಳೆದ ಎಂಟು ವರ್ಷಗಳಿಂದ ಸೆಕ್ಸ್‌ಗೆ ಒಪ್ಪದ ಪತ್ನಿಯನ್ನು ಪತಿ ಹತ್ಯೆ ಮಾಡಿದ ಘಟನೆ ನಡೆದಿದೆ. ಹತ್ಯೆಯಾದ ಮಹಿಳೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜನವರಿ 9 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 40 ವರ್ಷದ ಮಹಿಳೆಯನ್ನು ಆರೋಪಿ ಹತ್ಯೆ ಮಾಡಿ, ಶವವನ್ನು ಸರ್ಕಾರಿ ಮಹಾರಾಜ ಯಶವಂತರಾವ್ ಆಸ್ಪತ್ರೆಗೆ ಕೊಂಡೊಯ್ದಿದ್ದ. ಈ ವೇಳೆ, ತನ್ನ ಪತ್ನಿ ರಕ್ತದೊತ್ತಡದಿಂದ ತಲೆ ಸುತ್ತಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದಿದ್ದ.
ಮರಣೋತ್ತರ ಪರೀಕ್ಷೆಯಲ್ಲಿ ಕತ್ತು ಹಿಸುಕಿ ಹತ್ಯೆ ಮಾಡಿರುವುದು ಗೊತ್ತಾಗಿತ್ತು. ವಿಚಾರಣೆಯ ಸಮಯದಲ್ಲಿ ಮಹಿಳೆಯ ಪತಿ ಭಾವುಕನಾಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿ ಮೆಕ್ಯಾನಿಕ್ ಆಗಿದ್ದು, ಕಳೆದ ಎಂಟು ವರ್ಷಗಳಿಂದ ತನ್ನ ಪತ್ನಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ್ದಳು ಎಂದು ಹೇಳಿಕೊಂಡಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!