ಉದಯವಾಹಿನಿ,ಔರಾದ್
: ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಯಾದ ಪ್ರಭಾರಿ ಮುಖ್ಯ ಮುಖ್ಯಗುರುಗಳಾದ ಅಜೀಜೋದ್ದೀನ್ ಅವರಿಗೆ ಗ್ರಾಮಸ್ಥರು ಸನ್ಮಾನಿಸಿ ಬಿಳ್ಕೂಟ್ಟರು. ಸುಧಿರ್ಗ 25 ವರ್ಷಗಳ ಕಾಲ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕ ಅಜೀಜೋದ್ದೀನ್ ಅವರ ಪಾತ್ರ ಅಪಾರವಾಗಿದೆ ಇದರಿಂದಾಗಿ ಅನೇಕ ವಿದ್ಯಾರ್ಥಿಗಳು ಸರ್ಕಾರಿ ಹುದ್ದೆಗಳು ಸೇರಿದಂತೆ ಇತರ ಕಡೆಗಳಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ವಿಧ್ಯಾರ್ಥಿಗಳ ಪಾಲಿಗೆ ನೆಚ್ಚಿನ ಗುರುಗಳಾಗಿದ್ದರು.
ಈ ಸಂದರ್ಭದಲ್ಲಿ ವಿವಿಧ ಶಾಲೆಗಳ ಮುಖ್ಯ ಗುರುಗಳು, ಎಸ್ಡಿಎಂಸಿ ಅಧ್ಯಕ್ಷ, ಸದಸ್ಯರು, ಗ್ರಾಮದ ಮುಖಂಡರು, ಶಿಕ್ಷಕರು ಸೇರಿದಂತೆ ವಿಧ್ಯಾರ್ಥಿಗಳು ಇದ್ದರು.
